‘ನಮ್ಮ ಪ್ರೀತಿಯ ರಾಮು’ ಸಿನಿಮಾ ನೋಡಿ ಖುಷಿಪಟ್ಟ ದರ್ಶನ್ ಅಭಿಮಾನಿಗಳು

|

Updated on: Feb 14, 2025 | 6:06 PM

ದರ್ಶನ್ ನಟನೆಯ ‘ನಮ್ಮ ಪ್ರೀತಿಯ ರಾಮು’ ಸಿನಿಮಾ ಮರು ಬಿಡುಗಡೆ ಆಗಿದೆ. ಇಂದು (ಫೆ.14) ಈ ಸಿನಿಮಾ ನೋಡಿದ ಅಭಿಮಾನಿಗಳು ತಮ್ಮ ಮನದ ಮಾತುಗಳನ್ನು ಹಂಚಿಕೊಂಡಿದ್ದಾರೆ. ಈ ವರ್ಷ ದರ್ಶನ್ ಅವರು ಅಭಿಮಾನಿಗಳ ಜೊತೆ ಬರ್ತ್​ಡೇ ಸೆಲೆಬ್ರೇಟ್ ಮಾಡಲು ಸಾಧ್ಯವಾಗುತ್ತಿಲ್ಲ. ಸಿನಿಮಾ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

‘ನಮ್ಮ ಪ್ರೀತಿಯ ರಾಮು’ ಸಿನಿಮಾದ ಮೂಲಕ ಪ್ರೇಕ್ಷಕರು ನಟ ದರ್ಶನ್ ಅವರನ್ನು ಮತ್ತೆ ದೊಡ್ಡ ಪರದೆ ಮೇಲೆ ನೋಡಿ ಎಂಜಾಯ್ ಮಾಡಿದ್ದಾರೆ. ಸಿನಿಮಾ ನೋಡಿದ ಬಳಿಕ ತಮ್ಮ ಅಭಿಪ್ರಾಯವನ್ನು ಪ್ರೇಕ್ಷಕರು ತಿಳಿಸಿದ್ದಾರೆ. ಈ ಚಿತ್ರದಲ್ಲಿನ ದರ್ಶನ್ ಅವರ ನಟನೆಯನ್ನು ಪ್ರೇಕ್ಷಕರು ಹೊಗಳುತ್ತಿದ್ದಾರೆ. ದರ್ಶನ್ ಆದಷ್ಟು ಬೇಗ ಬೆನ್ನು ನೋವಿನಿಂದ ಸಂಪೂರ್ಣ ಗುಣಮುಖರಾಗಲಿ ಎಂದು ಫ್ಯಾನ್ಸ್ ಹೇಳಿದ್ದಾರೆ. ‘ಡೆವಿಲ್’ ಸಿನಿಮಾಗಾಗಿಯೂ ಅಭಿಮಾನಿಗಳು ಕಾದಿದ್ದಾರೆ. ಫೆ.16ರಂದು ಅದರ ಟೀಸರ್​ ಬಿಡುಗಡೆ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.