ದರ್ಶನ್ ಆಸ್ಪತ್ರೆಗೆ ಬಂದಾಗಲೂ ಕಡಿಮೆ ಆಗಲಿಲ್ಲ ಅಭಿಮಾನಿಗಳ ಅಬ್ಬರ
ನಟ ದರ್ಶನ್ ಅವರಿಗೆ ಇರುವ ಅಭಿಮಾನಿಗಳ ಬಳಗ ದೊಡ್ಡದು. ಅವರು ಎಲ್ಲೇ ಹೋದರೂ ಸಾಕಷ್ಟು ಜನರು ಸೇರುತ್ತಾರೆ. ಇಂದು (ನ.1) ಬೆನ್ನು ನೋವಿನ ಚಿಕಿತ್ಸೆಗಾಗಿ ದರ್ಶನ್ ಅವರು ಕೆಂಗೇರಿಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ವೇಳೆ ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ ನೋಡಿ..
ಜಾಮೀನು ಪಡೆದು ಜೈಲಿನಿಂದ ಹೊರಬಂದ ದರ್ಶನ್ ಅವರಿಗೆ ತುರ್ತಾಗಿ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರ ಬೆನ್ನು ನೋವಿನಿಂದ ಅವರು ಬಳಲುತ್ತಿದ್ದು, ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಗೆ ಅವರು ಎಂಟ್ರಿ ನೀಡುವಾಗ ಅಪಾರ ಸಂಖ್ಯೆಯ ಅಭಿಮಾನಿಗಳು ಜಮಾಯಿಸಿದ್ದರು. ‘ಜೈ ಡಿ ಬಾಸ್’ ಎಂದು ಜೈಕಾರ ಹಾಕಿದರು. ಚಿಕಿತ್ಸೆಯ ಸಲುವಾಗಿ ದರ್ಶನ್ಗೆ ಆರು ವಾರಗಳ ಕಾಲ ಜಾಮೀನು ನೀಡಲಾಗಿದೆ. 6 ದಿನಗಳ ಒಳಗೆ ಅವರು ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Nov 01, 2024 04:47 PM
Latest Videos