ದರ್ಶನ್ ಆಸ್ಪತ್ರೆಗೆ ಬಂದಾಗಲೂ ಕಡಿಮೆ ಆಗಲಿಲ್ಲ ಅಭಿಮಾನಿಗಳ ಅಬ್ಬರ

Updated on: Nov 01, 2024 | 4:48 PM

ನಟ ದರ್ಶನ್ ಅವರಿಗೆ ಇರುವ ಅಭಿಮಾನಿಗಳ ಬಳಗ ದೊಡ್ಡದು. ಅವರು ಎಲ್ಲೇ ಹೋದರೂ ಸಾಕಷ್ಟು ಜನರು ಸೇರುತ್ತಾರೆ. ಇಂದು (ನ.1) ಬೆನ್ನು ನೋವಿನ ಚಿಕಿತ್ಸೆಗಾಗಿ ದರ್ಶನ್ ಅವರು ಕೆಂಗೇರಿಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ವೇಳೆ ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ ನೋಡಿ..

ಜಾಮೀನು ಪಡೆದು ಜೈಲಿನಿಂದ ಹೊರಬಂದ ದರ್ಶನ್​ ಅವರಿಗೆ ತುರ್ತಾಗಿ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರ ಬೆನ್ನು ನೋವಿನಿಂದ ಅವರು ಬಳಲುತ್ತಿದ್ದು, ಬಿಜಿಎಸ್​ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಗೆ ಅವರು ಎಂಟ್ರಿ ನೀಡುವಾಗ ಅಪಾರ ಸಂಖ್ಯೆಯ ಅಭಿಮಾನಿಗಳು ಜಮಾಯಿಸಿದ್ದರು. ‘ಜೈ ಡಿ ಬಾಸ್’ ಎಂದು ಜೈಕಾರ ಹಾಕಿದರು. ಚಿಕಿತ್ಸೆಯ ಸಲುವಾಗಿ ದರ್ಶನ್​ಗೆ ಆರು ವಾರಗಳ ಕಾಲ ಜಾಮೀನು ನೀಡಲಾಗಿದೆ. 6 ದಿನಗಳ ಒಳಗೆ ಅವರು ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Nov 01, 2024 04:47 PM
Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More