‘ನಾನು ದರ್ಶನ್ ಪರ ಮಾತನಾಡಿದವಳೇ, ಸುದೀಪ್ ಅಭಿಮಾನಿ ಅಂತ ಟಾರ್ಗೆಟ್ ಮಾಡ್ತಾರೆ’; ಸೋನು ಶೆಟ್ಟಿ
ದರ್ಶನ್ ವಿರುದ್ಧ ಧ್ವನಿ ಎತ್ತಿದ ಸೋನು ಶೆಟ್ಟಿ ಸದ್ಯ ವಿವಾದಕ್ಕೆ ಗುರಿಯಾಗಿದ್ದಾರೆ. ಅವರಿಗೆ ಅಶ್ಲೀಲ ಸಂದೇಶ ಕಳುಹಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಹೀಗಿರುವಾಗಲೇ ಅವರು ಟಿವಿ9 ಕನ್ನಡದ ಜೊತೆಗೆ ಮಾತನಾಡಿದ್ದಾರೆ. ಈ ವೇಳೆ ಅವರು ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಆ ವಿಡಿಯೋ ಇಲ್ಲಿದೆ.
ಸೋನು ಶೆಟ್ಟಿ (Sonu Shetty) ಸದ್ಯ ಸುದ್ದಿಯಲ್ಲಿದ್ದಾರೆ. ಇತ್ತೀಚೆಗೆ ಅವರು ‘ದರ್ಶನ್ ರೌಡಿ ಆಗಿರಬೇಕಿತ್ತು, ತಪ್ಪಾಗಿ ಹೀರೋ ಆಗಿದ್ದಾರೆ’ ಎಂದು ವಿವಾದ ಮಾಡಿಕೊಂಡಿದ್ದರು. ಆ ಬಳಿಕ ದರ್ಶನ್ ಫ್ಯಾನ್ಸ್ ಸೋನು ಶೆಟ್ಟಿ ಅವರ ಸೋಶಿಯಲ್ ಮೀಡಿಯಾ ಖಾತೆಗೆ ಕೆಟ್ಟದಾಗಿ ಕಮೆಂಟ್ ಮಾಡುವ ಕೆಲಸವನ್ನು ಮಾಡುತ್ತಿದ್ದಾರೆ. ಈ ಬಗ್ಗೆ ಸೋನು ಶೆಟ್ಟಿ ಅವರು ಸ್ಪಷ್ಟನೆ ನೀಡುವ ಕೆಲಸ ಮಾಡಿದ್ದಾರೆ. ‘ನನಗೂ ರೇಣುಕಾಸ್ವಾಮಿ ಮೆಸೇಜ್ ಮಾಡಿದ್ದ. ಆತನನ್ನು ನಾನು ಬ್ಲಾಕ್ ಮಾಡಿದ್ದೆ. ಆ ವೇಳೆ ನಾನು ದರ್ಶನ್ ಪರವೇ ಮಾತನಾಡಿದ್ದೆ. ನಾನು ಸುದೀಪ್ ಅಭಿಮಾನಿ ಅನ್ನೋ ಕಾರಣಕ್ಕೆ ನನ್ನ ಟಾರ್ಗೆಟ್ ಮಾಡುತ್ತಿದ್ದಿರಬಹುದು’ ಎಂದು ಸೋನು ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ

