‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’; ಯುವ ರೈತ ಚೇತನ್

Updated on: Jul 10, 2026 | 12:27 PM

ಯುವ ರೈತ ಚೇತನ್ ಅವರು ಸಿನಿಮಾ ಮಾಡುತ್ತಿದ್ದಾರೆ. ಅವರು ಹೀರೋ ಆಗಿ ಬಡ್ತಿ ಪಡೆದಿದ್ದಾರೆ. ‘ದೇವಿ’ ಹೆಸರಿನ ಸಿನಿಮಾ ಸೆಟ್ಟೇರಿದೆ. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ದರ್ಶನ್ ಬಗ್ಗೆ ಮಾತನಾಡಿದ್ದಾರೆ. ದರ್ಶನ್ ಅಭಿಮಾನಿಗಳು ಎಂದಿಗೂ ತಪ್ಪು ಮಾಡಲ್ಲ ಎಂದು ನೇರ ಮಾತುಗಳಲ್ಲಿ ಹೇಳಿದ್ದಾರೆ. ಈ ವಿಡಿಯೋ ವೈರಲಲ್ ಆಗಿದೆ.

ಯುವ ರೈತ ಚೇತನ್ ಅವರು ಈಗ ‘ದೇವಿ’ ಚಿತ್ರದ ಮೂಲಕ ಹೀರೋ ಆಗಿದ್ದಾರೆ. ಈ ಸಿನಿಮಾದ ಮುಹೂರ್ತ ನಡೆದಿದೆ. ಈ ಚಿತ್ರಕ್ಕೆ ಭವ್ಯಾ ಗೌಡ ನಾಯಕಿ. ಈ ಸಿನಿಮಾದ ಕಾರ್ಯಕ್ರಮದಲ್ಲಿ ಮಾತನಾಡಿದ ಚೇತನ್ ಅವರು, ದರ್ಶನ್ ಬಗ್ಗೆ ಮಾತನಾಡಿದ್ದಾರೆ. ‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ. ಸಿನಿಮಾ ಇಂಡಸ್ಟ್ರಿಗೆ ಬಂದಾಗಿನಿಂದ ಅನೇಕರು ಸಹಾಯ ಮಾಡುತ್ತಿದ್ದಾರೆ. ದರ್ಶನ್ ಅಭಿಮಾನಿಗಳು ನಮ್ಮನ್ನು ಪ್ರೀತಿಸುತ್ತಿದ್ದಾರೆ. ಅವರು ಎಂದಿಗೂ ತಪ್ಪು ಮಾಡಲ್ಲ’ ಎಂದಿದ್ದಾರೆ ಚೇತನ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More