ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ದಾಸನಿಗೆ ಬೇಸರ
ಬಳ್ಳಾರಿ ಜೈಲಿನಲ್ಲಿ ದರ್ಶನ್ ಅವರನ್ನು ಭೇಟಿಯಾಗಲು ಪತ್ನಿ ವಿಜಯಲಕ್ಷ್ಮಿ, ಸಹೋದರ ದಿನಕರ್ ತೂಗುದೀಪ ಅವರು ತೆರಳಿದ್ದಾರೆ. ಆದರೆ ತಾಯಿ ಮೀನಾ ಅವರು ಬಳ್ಳಾರಿಗೆ ಹೋಗಿಲ್ಲ. ಆದ್ದರಿಂದ ದರ್ಶನ್ಗೆ ಬೇಸರ ಆಗಿದೆ. ಲಾಯರ್ ಜೊತೆಗೆ ದರ್ಶನ್ ಮಾತುಕಥೆ ನಡೆಸಿದ್ದಾರೆ. ಮುಂದಿನ ಕಾನೂನು ಪ್ರಕ್ರಿಯೆಗಳ ಬಗ್ಗೆ ಚರ್ಚೆ ಮಾಡಲಾಗಿದೆ.
ಕೊಲೆ ಆರೋಪಿಯಾಗಿ ಬಳ್ಳಾರಿ ಜೈಲು ಸೇರಿದ ದರ್ಶನ್ ಅವರನ್ನು ಇಂದು (ಸೆಪ್ಟೆಂಬರ್ 12) ಕುಟುಂಬದವರು ಭೇಟಿ ಮಾಡಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಚಾರ್ಜ್ಶೀಟ್ ಸಲ್ಲಿಕೆ ಆದ ಬಳಿಕ ಇದೇ ಮೊದಲ ಬಾರಿಗೆ ದರ್ಶನ್ ಅವರನ್ನು ಪತ್ನಿ ವಿಜಯಲಕ್ಷ್ಮಿ ಮತ್ತು ತಮ್ಮ ದಿನಕರ್ ಭೇಟಿ ಮಾಡಿದ್ದಾರೆ. ಜೈಲು ಸಂದರ್ಶಕರ ಕೊಠಡಿಯಲ್ಲಿ 25 ನಿಮಿಷಗಳ ಕಾಲ ಮಾತನಾಡಿದ್ದಾರೆ. ಕೊಲೆ ಕೇಸ್ನಲ್ಲಿ ದರ್ಶನ್ ಎ2 ಆಗಿದ್ದು, ಅವರ ವಿರುದ್ಧ ಅನೇಕ ಸಾಕ್ಷಿಗಳು ಇವೆ ಎಂಬುದು ಚಾರ್ಜ್ಶೀಟ್ನಲ್ಲಿ ಉಲ್ಲೇಖ ಆಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.