‘ಕಾಟೇರ’ ಚಿತ್ರಕ್ಕೆ 50 ದಿನ; ‘ಪ್ರಸನ್ನ’ ಚಿತ್ರಮಂದಿರಕ್ಕೆ 50 ವರ್ಷ: ಸಂಭ್ರಮಾಚರಣೆ ಲೈವ್ ನೋಡಿ..
‘ಕಾಟೇರ’ ಸಿನಿಮಾ ಯಶಸ್ವಿಯಾಗಿ ಐವತ್ತು ದಿನಗಳ ಪ್ರದರ್ಶನ ಕಂಡಿದೆ. ಬೆಂಗಳೂರಿನ ‘ಪ್ರಸನ್ನ’ ಚಿತ್ರಮಂದಿರ ಆರಂಭವಾಗಿ 50 ವರ್ಷಗಳು ಕಳೆದಿವೆ. ಒಂದೇ ವೇದಿಕೆಯಲ್ಲಿ ಈ ಎರಡು ಸಂಭ್ರಮವನ್ನು ಸೆಲೆಬ್ರೇಟ್ ಮಾಡಲಾಗುತ್ತಿದೆ. ಇದರಲ್ಲಿ ನಟ ದರ್ಶನ್ ಅವರು ಪಾಲ್ಗೊಂಡಿದ್ದಾರೆ. ಅಭಿಮಾನಿಗಳ ಸಮ್ಮುಖದಲ್ಲಿ ನಡೆಯುತ್ತಿರುವ ಕಾರ್ಯಕ್ರಮದ ಲೈವ್ ವಿಡಿಯೋ ಇಲ್ಲಿದೆ..
ಬೆಂಗಳೂರಿನ ಪ್ರಮುಖ ಚಿತ್ರಮಂದಿರಗಳಲ್ಲಿ ಒಂದಾದ ‘ಪ್ರಸನ್ನ’ ಥಿಯೇಟರ್ (Prasanna Theatre) ಆರಂಭವಾಗಿ 50 ವರ್ಷ ಪೂರ್ಣಗೊಂಡಿದೆ. ಈ ಸಂಭ್ರಮವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಹಾಗೆಯೇ ‘ಕಾಟೇರ’ ಸಿನಿಮಾ ತೆರೆಕಂಡು ಯಶಸ್ವಿಯಾಗಿ 50 (Kaatera 50 Days) ದಿನಗಳನ್ನು ಪೂರೈಸಿದೆ. ಒಂದೇ ವೇದಿಕೆಯಲ್ಲಿ ಈ ಎರಡು ಖುಷಿಯನ್ನು ಸೆಲೆಬ್ರೇಟ್ ಮಾಡಲಾಗುತ್ತಿದೆ. ಪ್ರಸನ್ನ ಚಿತ್ರಮಂದಿರದಲ್ಲಿ ಅಭಿಮಾನಿಗಳ ಎದುರು ಈ ಕಾರ್ಯಕ್ರಮ ನಡೆಯುತ್ತಿದೆ. ಈ ಸಂಭ್ರಮದಲ್ಲಿ ‘ಚಾಲೆಂಜಿಂಗ್ ಸ್ಟಾರ್’ ದರ್ಶನ್ (Darshan) ಹಾಗೂ ಇಡೀ ‘ಕಾಟೇರ’ ಚಿತ್ರತಂಡದವರು ಭಾಗಿ ಆಗಿದ್ದಾರೆ. ಇತ್ತೀಚೆಗೆ ದರ್ಶನ್ ಅವರು ಜನ್ಮದಿನ (ಫೆಬ್ರವರಿ 16) ಆಚರಿಸಿಕೊಂಡರು. ಮರುದಿನ ಶ್ರೀರಂಗಪಟ್ಟಣದಲ್ಲಿ ‘ಬೆಳ್ಳಿ ಪರ್ವ ಡಿ-25’ ಕಾರ್ಯಕ್ರಮ ನಡೆಯಿತು. ಈಗ ಅವರು ‘ಕಾಟೇರ’ ಸಿನಿಮಾದ 50ನೇ ದಿನದ ಸೆಲೆಬ್ರೇಷನ್ನಲ್ಲಿ ಭಾಗಿ ಆಗಿದ್ದಾರೆ. ಈ ಮೂಲಕ ಅವರು ಅಭಿಮಾನಿಗಳ ಜೊತೆ ಹೆಚ್ಚು ಕಾಲ ಕಳೆಯುತ್ತಿದ್ದಾರೆ. ಅವರ ಮುಂಬರುವ ಸಿನಿಮಾಗಳ ಮೇಲೆ ನಿರೀಕ್ಷೆ ಹೆಚ್ಚಾಗಿದೆ. ದರ್ಶನ್ ಅವರಿಗೆ ಇನ್ನೂ ಹೆಚ್ಚಿನ ಯಶಸ್ಸು ಸಿಗಲಿ ಎಂದು ಫ್ಯಾನ್ಸ್ ಹಾರೈಸುತ್ತಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ,