‘ಕಾಟೇರ’ ಚಿತ್ರಕ್ಕೆ 50 ದಿನ; ‘ಪ್ರಸನ್ನ’ ಚಿತ್ರಮಂದಿರಕ್ಕೆ 50 ವರ್ಷ: ಸಂಭ್ರಮಾಚರಣೆ ಲೈವ್​ ನೋಡಿ..

Updated on: Feb 20, 2024 | 11:52 AM

‘ಕಾಟೇರ’ ಸಿನಿಮಾ ಯಶಸ್ವಿಯಾಗಿ ಐವತ್ತು ದಿನಗಳ ಪ್ರದರ್ಶನ ಕಂಡಿದೆ. ಬೆಂಗಳೂರಿನ ‘ಪ್ರಸನ್ನ’ ಚಿತ್ರಮಂದಿರ ಆರಂಭವಾಗಿ 50 ವರ್ಷಗಳು ಕಳೆದಿವೆ. ಒಂದೇ ವೇದಿಕೆಯಲ್ಲಿ ಈ ಎರಡು ಸಂಭ್ರಮವನ್ನು ಸೆಲೆಬ್ರೇಟ್​ ಮಾಡಲಾಗುತ್ತಿದೆ. ಇದರಲ್ಲಿ ನಟ ದರ್ಶನ್​ ಅವರು ಪಾಲ್ಗೊಂಡಿದ್ದಾರೆ. ಅಭಿಮಾನಿಗಳ ಸಮ್ಮುಖದಲ್ಲಿ ನಡೆಯುತ್ತಿರುವ ಕಾರ್ಯಕ್ರಮದ ಲೈವ್​ ವಿಡಿಯೋ ಇಲ್ಲಿದೆ..

ಬೆಂಗಳೂರಿನ ಪ್ರಮುಖ ಚಿತ್ರಮಂದಿರಗಳಲ್ಲಿ ಒಂದಾದ ‘ಪ್ರಸನ್ನ’ ಥಿಯೇಟರ್ (Prasanna Theatre)​ ಆರಂಭವಾಗಿ 50 ವರ್ಷ ಪೂರ್ಣಗೊಂಡಿದೆ. ಈ ಸಂಭ್ರಮವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಹಾಗೆಯೇ ‘ಕಾಟೇರ’ ಸಿನಿಮಾ ತೆರೆಕಂಡು ಯಶಸ್ವಿಯಾಗಿ 50 (Kaatera 50 Days) ದಿನಗಳನ್ನು ಪೂರೈಸಿದೆ. ಒಂದೇ ವೇದಿಕೆಯಲ್ಲಿ ಈ ಎರಡು ಖುಷಿಯನ್ನು ಸೆಲೆಬ್ರೇಟ್​ ಮಾಡಲಾಗುತ್ತಿದೆ. ಪ್ರಸನ್ನ ಚಿತ್ರಮಂದಿರದಲ್ಲಿ ಅಭಿಮಾನಿಗಳ ಎದುರು ಈ ಕಾರ್ಯಕ್ರಮ ನಡೆಯುತ್ತಿದೆ. ಈ ಸಂಭ್ರಮದಲ್ಲಿ ‘ಚಾಲೆಂಜಿಂಗ್​ ಸ್ಟಾರ್’ ದರ್ಶನ್​ (Darshan) ಹಾಗೂ ಇಡೀ ‘ಕಾಟೇರ’ ಚಿತ್ರತಂಡದವರು ಭಾಗಿ ಆಗಿದ್ದಾರೆ. ಇತ್ತೀಚೆಗೆ ದರ್ಶನ್​ ಅವರು ಜನ್ಮದಿನ (ಫೆಬ್ರವರಿ 16) ಆಚರಿಸಿಕೊಂಡರು. ಮರುದಿನ ಶ್ರೀರಂಗಪಟ್ಟಣದಲ್ಲಿ ‘ಬೆಳ್ಳಿ ಪರ್ವ ಡಿ-25’ ಕಾರ್ಯಕ್ರಮ ನಡೆಯಿತು. ಈಗ ಅವರು ‘ಕಾಟೇರ’ ಸಿನಿಮಾದ 50ನೇ ದಿನದ ಸೆಲೆಬ್ರೇಷನ್​ನಲ್ಲಿ ಭಾಗಿ ಆಗಿದ್ದಾರೆ. ಈ ಮೂಲಕ ಅವರು ಅಭಿಮಾನಿಗಳ ಜೊತೆ ಹೆಚ್ಚು ಕಾಲ ಕಳೆಯುತ್ತಿದ್ದಾರೆ. ಅವರ ಮುಂಬರುವ ಸಿನಿಮಾಗಳ ಮೇಲೆ ನಿರೀಕ್ಷೆ ಹೆಚ್ಚಾಗಿದೆ. ದರ್ಶನ್​ ಅವರಿಗೆ ಇನ್ನೂ ಹೆಚ್ಚಿನ ಯಶಸ್ಸು ಸಿಗಲಿ ಎಂದು ಫ್ಯಾನ್ಸ್​ ಹಾರೈಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ,

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More