ಕೈ ನೋವಿನ ನಡುವೆಯೂ ಸ್ಟಾರ್ ಚಂದ್ರು ಪರ ನಟ ದರ್ಶನ್ ಭರ್ಜರಿ ಪ್ರಚಾರ
ನಟ ದರ್ಶನ್ ಅವರಿಗೆ ಇರುವ ಫ್ಯಾನ್ ಫಾಲೋಯಿಂಗ್ ಬಹಳ ದೊಡ್ಡದು. ಅವರು ಈಗ ಸ್ಟಾರ್ ಚಂದ್ರು ಪರವಾಗಿ ಚುನಾವಣಾ ಪ್ರಚಾರ ಮಾಡುತ್ತಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದ ಹಲವು ಊರುಗಳಿಗೆ ತೆರಳಿ ಅವರು ಪ್ರಚಾರದಲ್ಲಿ ಭಾಗಿ ಆಗಿದ್ದಾರೆ. ‘ಚಾಲೆಂಜಿಂಗ್ ಸ್ಟಾರ್’ ದರ್ಶನ್ ಅವರನ್ನು ಹತ್ತಿರದಿಂದ ನೋಡಲು ಅಭಿಮಾನಿಗಳು ಮುಗಿಬೀಳುತ್ತಿದ್ದಾರೆ.
‘ಚಾಲೆಂಜಿಂಗ್ ಸ್ಟಾರ್’ ದರ್ಶನ್ (Darshan) ಅವರು ಸಿನಿಮಾ ಕೆಲಸಗಳಿಗೆ ಸಣ್ಣ ಬಿಡುವು ನೀಡಿದ್ದಾರೆ. ಅದಕ್ಕೆ ಮುಖ್ಯ ಕಾರಣ ಕೈ ನೋವು. ಕೆಲವೇ ದಿನಗಳ ಹಿಂದೆ ಅವರಿಗೆ ಚಿಕ್ಕ ಸರ್ಜರಿ ಆಗಿದೆ. ಹಾಗಾಗಿ ಅವರು ತಕ್ಷಣಕ್ಕೆ ಶೂಟಿಂಗ್ನಲ್ಲಿ ಭಾಗಿಯಾಗಲು ಸಾಧ್ಯವಿಲ್ಲ. ಹಾಗಾಗಿ ಒಂದಷ್ಟು ದಿನಗಳ ಬ್ರೇಕ್ ಪಡೆದುಕೊಂಡಿದ್ದಾರೆ. ಅದರ ನಡುವೆಯೇ ದರ್ಶನ್ ಅವರು ಚುನಾವಣಾ ಪ್ರಚಾರದಲ್ಲಿ ಭಾಗಿ ಆಗಿದ್ದಾರೆ. ಮಂಡ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು (Star Chandru) ಪರವಾಗಿ ದರ್ಶನ್ ಅವರು ಪ್ರಚಾರ ಮಾಡುತ್ತಿದ್ದಾರೆ. ಹಲವು ಊರುಗಳಿಗೆ ತೆರಳಿ ಮತ ಕೇಳುತ್ತಿದ್ದಾರೆ. ದರ್ಶನ್ ಹೋದಲ್ಲೆಲ್ಲ ಜನರು ಅಪಾರ ಸಂಖ್ಯೆಯಲ್ಲಿ ಸೇರುತ್ತಿದ್ದಾರೆ. ನೆಚ್ಚಿನ ನಟನ ಮಾತುಗಳನ್ನು ಕೇಳಲು ಮಂಡ್ಯ (Mandya) ಜನತೆ ಮುಗಿಬೀಳುತ್ತಿದ್ದಾರೆ. ಇಂದು (ಏಪ್ರಿಲ್ 22) ಕೂಡ ದರ್ಶನ್ ಅವರು ಸಕ್ರಿಯವಾಗಿ ಕ್ಯಾಂಪೇನ್ನಲ್ಲಿ ಪಾಲ್ಗೊಂಡಿದ್ದಾರೆ. ‘ಈ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಟಾರ್ ಚಂದ್ರು ಅವರು ನಿಂತಿದ್ದಾರೆ. ತಮ್ಮ ಅಮೂಲ್ಯವಾದ ಮತವನ್ನು ಅವರಿಗೆ ಹಾಕಿ. ನಿಮ್ಮ ಸೇವೆಯನ್ನು ಮಾಡುವ ಅವಕಾಶ ಮಾಡಿಕೊಡಬೇಕು ಎಂದು ನಿಮ್ಮೆಲ್ಲರಲ್ಲಿ ತಲೆ ಬಾಗಿ ಬೇಡಿಕೊಳ್ಳುತ್ತೇನೆ. ಧನ್ಯವಾದಗಳು’ ಎಂದಿದ್ದಾರೆ ದರ್ಶನ್.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.