ಚಾಮುಂಡೇಶ್ವರಿ ಈ ಜಾಗದಲ್ಲಿ ನೆಲೆಸಿದ್ದಾಳೆ: ಗೌಡಗೆರೆ ದೇವಾಲಯದ ಬಗ್ಗೆ ದರ್ಶನ್ ತಾಯಿ ಮಾತು
ಚನ್ನಪಟ್ಟಣ ತಾಲೂಕಿನ ಗೌಡಗೆರೆ ಗ್ರಾಮದಲ್ಲಿರುವ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಮೀನಾ ತೂಗುದೀಪ ಭೇಟಿ ನೀಡಿದ್ದಾರೆ. ದೇವರ ದರ್ಶನ ಪಡೆದ ಬಳಿಕ ಅವರು ಮಾತನಾಡಿದರು. ಮೀನಾ ತೂಗುದೀಪ ಅವರಿಗೆ ದೇವಾಲಯದ ಆಡಳಿತ ಮಂಡಳಿಯಿಂದ ಗೌರವ ಸಲ್ಲಿಸಲಾಯಿತು. ಎಲ್ಲರಿಗೂ ಒಳ್ಳೆಯದಾಗಲಿ ಎಂದು ಮೀನಾ ಅವರು ಹೇಳಿದ್ದಾರೆ. ಆ ವಿಡಿಯೋ ಇಲ್ಲಿದೆ..
ಗೌಡಗೆರೆ ಚಾಮುಂಡೇಶ್ವರಿ ದೇವಾಲಯಕ್ಕೆ ನಟ ದರ್ಶನ್ ತಾಯಿ ಮೀನಾ ತೂಗುದೀಪ ಅವರು ಭೇಟಿ ನೀಡಿದ್ದಾರೆ. ಚಾಮುಂಡೇಶ್ವರಿ ದರ್ಶನ ಪಡೆದು ಅವರು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕ್ಷೇತ್ರದಲ್ಲಿ ಅವರು ಪವಾಡ ಬಸಪ್ಪನ ಆಶೀರ್ವಾದ ಪಡೆದಿದ್ದಾರೆ. ಕಷ್ಟಗಳ ನಿವಾರಣೆ ಮಾಡುವಂತೆ ಅವರು ದೇವರ ಮೊರೆಹೋಗಿದ್ದಾರೆ. ಬಳಿಕ ಅವರು ದೇವಸ್ಥಾನದ ಬಗ್ಗೆ ಮಾತನಾಡಿದ್ದಾರೆ. ‘ಚಾಮುಂಡೇಶ್ವರಿ ಈ ಜಾಗದಲ್ಲಿ ನೆಲೆಸಿದ್ದಾಳೆ. ಇಲ್ಲಿ ಪಾಸಿಟಿವ್ ಎನರ್ಜಿ ಇದೆ. ಹಾಗಾಗಿ ಬಂದು ದರ್ಶನ ಪಡೆದಿದ್ದೇನೆ. ಇಲ್ಲಿಗೆ ಬರುವ ಎಲ್ಲಾ ಭಕ್ತರಿಗೂ ಚಾಮುಂಡೇಶ್ವರಿ ಒಳ್ಳೆಯದು ಮಾಡಲಿ’ ಎಂದು ಅವರು ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.