‘ಕಾಟೇರ’ ಸಿನಿಮಾ ರಿಲೀಸ್ ದಿನಾಂಕ ನಿರ್ಧರಿಸೋರು ಯಾರು? ತರುಣ್ ಸುಧೀರ್ ಕೊಟ್ಟ ಉತ್ತರ ಇದು

Updated on: Sep 12, 2023 | 11:09 AM

‘ರಾಬರ್ಟ್’ ಬಳಿಕ ದರ್ಶನ್ ಹಾಗೂ ನಿರ್ದೇಶಕ ತರುಣ್ ಸುಧೀರ್ ಮತ್ತೊಮ್ಮೆ ಒಟ್ಟಾಗಿದ್ದಾರೆ. ಈಗಾಗಲೇ ಸಿನಿಮಾ ಶೂಟಿಂಗ್ ಪೂರ್ಣಗೊಂಡಿದ್ದು, ಮೂರು ಸಾಂಗ್ ಚಿತ್ರೀಕರಣ ಮಾತ್ರ ಬಾಕಿ ಇದೆ. ‘ಕಾಟೇರ’ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಕೂಡ ಬಹುತೇಕ ಪೂರ್ಣಗೊಂಡಿವೆ.

ದರ್ಶನ್ (Darshan) ಹಾಗೂ ಮಾಲಾಶ್ರೀ ಮಗಳು ಆರಾಧಾನಾ ‘ಕಾಟೇರ’ ಚಿತ್ರದಲ್ಲಿ ಒಟ್ಟಾಗಿ ನಟಿಸಿದ್ದಾರೆ. ಈ ಸಿನಿಮಾ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ. ‘ರಾಬರ್ಟ್’ ಬಳಿಕ ದರ್ಶನ್ ಹಾಗೂ ನಿರ್ದೇಶಕ ತರುಣ್ ಸುಧೀರ್ ಮತ್ತೊಮ್ಮೆ ಒಟ್ಟಾಗಿದ್ದಾರೆ. ಈಗಾಗಲೇ ಸಿನಿಮಾ ಶೂಟಿಂಗ್ ಪೂರ್ಣಗೊಂಡಿದ್ದು, ಮೂರು ಸಾಂಗ್ ಚಿತ್ರೀಕರಣ ಮಾತ್ರ ಬಾಕಿ ಇದೆ. ‘ಕಾಟೇರ’ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಕೂಡ ಬಹುತೇಕ ಪೂರ್ಣಗೊಂಡಿವೆ. ಸಿನಿಮಾ ಯಾವಾಗ ರಿಲೀಸ್ ಎನ್ನುವ ಬಗ್ಗೆ ತರುಣ್ ಸುಧೀರ್ ಉತ್ತರಿಸಿದ್ದಾರೆ. ‘ಕಾಟೇರ (Kaatera Movie) ಚಿತ್ರವನ್ನು ಯಾವಾಗ ತೆರೆಗೆ ತರಬೇಕು ಎನ್ನುವ ಬಗ್ಗೆ ದರ್ಶನ್ ಹಾಗೂ ರಾಕ್​ಲೈನ್ ವೆಂಕಟೇಶ್ ನಿರ್ಧಾರ ತೆಗೆದುಕೊಳ್ಳುತ್ತಾರೆ. ಈ ವರ್ಷವೇ ಸಿನಿಮಾ ರಿಲೀಸ್ ಮಾಡುವ ಗುರಿ ಇಟ್ಟುಕೊಂಡಿದ್ದೇವೆ’ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published on: Sep 12, 2023 09:15 AM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More