ಸಹಿಸಲಾಗದ ನೋವಿನಿಂದ ಆಸ್ಪತ್ರೆಗೆ ಬಂದ ದರ್ಶನ್; ಮುಗಿಬಿದ್ದ ಅಭಿಮಾನಿಗಳು
ದರ್ಶನ್ ಅವರಿಗೆ ಬೆನ್ನು ನೋವು ವಿಪರೀತ ಆಗಿದೆ. ಹಾಗಾಗಿ ಎಂಆರ್ಐ ಸ್ಕ್ಯಾನಿಂಗ್ ಮಾಡುವ ಸಲುವಾಗಿ ಅವರನ್ನು ವಿಮ್ಸ್ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆ. ಈ ವೇಳೆ ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ. ‘ಜೈ ಡಿ ಬಾಸ್’ ಎಂದು ಫ್ಯಾನ್ಸ್ ಜೈಕಾರ ಹಾಕಿದ್ದಾರೆ. ಅಭಿಮಾನಿಗಳ ಗದ್ದಲದ ನಡುವೆಯೇ ದರ್ಶನ್ ಅವರನ್ನು ಆಸ್ಪತ್ರೆ ಒಳಗೆ ಕರೆದುಕೊಂಡು ಹೋಗಲಾಯಿತು.
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಅವರಿಗೆ ಬೆನ್ನು ನೋವು ಹೆಚ್ಚಾಗಿದೆ. ಅವರ ಮುಖಭಾವದಲ್ಲೇ ನೋವಿನ ತೀವ್ರತೆ ಗೊತ್ತಾಗುತ್ತಿದೆ. ಬಳ್ಳಾರಿ ಜೈಲಿನಲ್ಲಿ ಇರುವ ಅವರನ್ನು ವಿಮ್ಸ್ ಆಸ್ಪತ್ರೆಗೆ ಕರೆದುಕೊಂಡ ಬಂದು ಹೆಚ್ಚಿನ ತಪಾಸಣೆ ಮಾಡಿಸಲಾಗಿದೆ. ವಿಮ್ಸ್ ನ್ಯೂರೋ ಸರ್ಜನ್ ಡಾ. ವಿಶ್ವನಾಥ್ ಅವರು ದರ್ಶನ್ ಅವರ ತಪಾಸಣೆ ಮಾಡಿದ್ದಾರೆ. ಬಳಿಕ ದರ್ಶನ್ ಅವರನ್ನು ವಾಪಸ್ ಬಳ್ಳಾರಿ ಜೈಲಿಗೆ ಕರೆದುಕೊಂಡು ಬರಲಾಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
