Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯಾಯಾಲಯಕ್ಕೆ ಹಾಜರಾದ ದರ್ಶನ್, ಪವಿತ್ರಾ ಮತ್ತು ಗ್ಯಾಂಗ್: LIVE

ನ್ಯಾಯಾಲಯಕ್ಕೆ ಹಾಜರಾದ ದರ್ಶನ್, ಪವಿತ್ರಾ ಮತ್ತು ಗ್ಯಾಂಗ್: LIVE

ಮಂಜುನಾಥ ಸಿ.
|

Updated on: Feb 25, 2025 | 11:23 AM

Darshan Thoogudeepa: ದರ್ಶನ್, ಪವಿತ್ರಾ ಗೌಡ ಸೇರಿದಂತೆ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳೆಲ್ಲ ಇಂದು (ಫೆಬ್ರವರಿ 25) ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯದ ಮುಂದೆ ಹಾಜರಾಗಿದ್ದಾರೆ. ನ್ಯಾಯಾಲಯ ವಿಧಿಸಿರುವ ಷರತ್ತಿನಂತೆ ಪ್ರಕರಣದ ಎಲ್ಲ ಆರೋಪಿಗಳು ಪ್ರತಿ ತಿಂಗಳು ನ್ಯಾಯಾಲಯದ ಮುಂದೆ ಹಾಜರಾಗಬೇಕು. ಪ್ರಕರಣದ ಕ್ಷಣ-ಕ್ಷಣದ ಮಾಹಿತಿಯನ್ನು ಲೈವ್ ಆಗಿ ಇಲ್ಲಿ ನೋಡಿ...

ದರ್ಶನ್, ಪವಿತ್ರಾ ಗೌಡ ಸೇರಿದಂತೆ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎಲ್ಲ ಆರೋಪಿಗಳು ಇಂದು (ಫೆಬ್ರವರಿ 25) ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯದ ಮುಂದೆ ಹಾಜರಾಗಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಜಾಮೀನು ನೀಡುವಾಗ ವಿಧಿಸಿದ್ದ ಷರತ್ತಿನಂತೆ ಪ್ರತಿ ತಿಂಗಳು ನ್ಯಾಯಾಲಯದ ಮುಂದೆ ಆರೋಪಿಗಳು ಹಾಜರಾಗುವಂತೆ ಷರತ್ತು ವಿಧಿಸಲಾಗಿತ್ತು. ಅದೇ ಕಾರಣಕ್ಕೆ ಇಂದು ಎಲ್ಲ ಆರೋಪಿಗಳು ನ್ಯಾಯಾಲಯದ ಮುಂದೆ ಹಾಜರಾಗುತ್ತಿದ್ದಾರೆ. ಪವಿತ್ರಾ ಗೌಡ, ದರ್ಶನ್ ಹಾಗೂ ಇತರೆ ಆರೋಪಿಗಳು ನ್ಯಾಯಾಲಯದ ಆವರಣ ತಲುಪಿದ್ದು, ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ