ಆಸ್ಪತ್ರೆಯಿಂದ ದರ್ಶನ್ ಡಿಸ್ಚಾರ್ಜ್; ಶಸ್ತ್ರಚಿಕಿತ್ಸೆ ಇಲ್ಲದೆ ಹೊರ ಬಂದ ನಟ
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಅವರು ಇಷ್ಟು ದಿನ ಆಸ್ಪತ್ರೆಯಲ್ಲಿ ಇದ್ದರು. ಈಗ ಅವರು ಜಾಮೀನು ಸಿಗುತ್ತಿದ್ದಂತೆ ಆಸ್ಪತ್ರೆಯಿಂದ ಹೊರ ಬಂದಿದ್ದಾರೆ. ಕಣ್ಣಿಗೆ ಕನ್ನಡಕ ಹಾಕಿ, ಸ್ಟೈಲಿಶ್ ಆಗಿ ನಡೆದುಕೊಂಡು ಅವರು ಹೊರಕ್ಕೆ ಬಂದಿದ್ದಾರೆ. ಆ ಸಂದರ್ಭದ ವಿಡಿಯೋ ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ.
ನಟ ದರ್ಶನ್ ಅವರು ಶಸ್ತ್ರಚಿಕಿತ್ಸೆ ಪಡೆಯಲು ಮಧ್ಯಂತರ ಜಾಮೀನು ಪಡೆದಿದ್ದರು. ಈ ಕಾರಣಕ್ಕೆ ಕಳೆದ ಒಂದೂವರೆ ತಿಂಗಳಿಂದ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲೇ ಇದ್ದರು. ಈಗ ಅವರಿಗೆ ಜಾಮೀನು ಸಿಕ್ಕಿದ್ದು, ಅವರು ಶಸ್ತ್ರಚಿಕಿತ್ಸೆ ಮಾಡಿಸದೆ ಆಸ್ಪತ್ರೆಯಿಂದ ಹೊರ ಬಂದಿದ್ದಾರೆ. ಇಂದು (ಡಿಸೆಂಬರ್ 18) ಆಸ್ಪತ್ರೆಯಿಂದ ಹೊರ ಬಂದ ಅವರು, ರೆಡಿ ಇದ್ದ ಕಾರುಗಳನ್ನು ಏರಿ ತೆರಳಿದ್ದಾರೆ. ಈ ವೇಳೆ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Dec 18, 2024 11:10 AM