ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ತಂಡದ ಸುದ್ದಿಗೋಷ್ಠಿ; ಇಲ್ಲಿದೆ ಲೈವ್

Updated on: Dec 02, 2025 | 12:08 PM

ದರ್ಶನ್ ಅವರು ‘ಡೆವಿಲ್’ ಸಿನಿಮಾದಲ್ಲಿ ನಟಿಸಿದ್ದಾರೆ. ಆದರೆ, ಅವರು ಈಗ ಜೈಲಿನಲ್ಲಿ ಇದ್ದಾರೆ. ಈ ಸಿನಿಮಾದ ಸುದ್ದಿಗೋಷ್ಠಿಯನ್ನು ತಂಡದವರು ಹಮ್ಮಿಕೊಂಡಿದ್ದಾರೆ. ಈ ಸುದ್ದಿಗೋಷ್ಠಿಯ ಲೈವ್ ವಿಡಿಯೋ ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ. ಲೈವ್ ವಿಡಿಯೋ ಇಲ್ಲಿದೆ. ಈ ವೇಳೆ ಇಡೀ ತಂಡ ಭಾಗಿ ಆಗಿದೆ.

ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಜೈಲಿನಲ್ಲಿ ಇದ್ದಾರೆ. ಹೀಗಿರುವಾಗಲೇ ಅವರ ನಟನೆಯ ‘ಡೆವಿಲ್’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಡಿಸೆಂಬರ್ 5ರಂದು ಸಿನಿಮಾದ ಟ್ರೇಲರ್ ರಿಲೀಸ್ ಆಗಲಿದೆ. ಅದಕ್ಕೂ ಮೊದಲು ತಂಡ ಸುದ್ದಿಗೋಷ್ಠಿ ನಡೆಸಿದೆ. ಆ ಸುದ್ದಿಗೋಷ್ಠಿಯ ಲೈವ್ ವಿಡಿಯೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More