‘ಕಾಟೇರ’ ಟ್ರೇಲರ್ ಲಾಂಚ್ ಕಾರ್ಯಕ್ರಮಕ್ಕೆ ಅಭಿಮಾನಿಗಳ ಆಮಂತ್ರಿಸಿದ ದರ್ಶನ್

Updated on: Dec 16, 2023 | 2:31 PM

‘ಕಾಟೇರ’ ಚಿತ್ರದ ಟ್ರೇಲರ್ ಇಂದು (ಡಿಸೆಂಬರ್ 16) ಸಂಜೆ ರಿಲೀಸ್ ಆಗಲಿದೆ. ಹುಬ್ಬಳ್ಳಿಯಲ್ಲಿ ಅದ್ದೂರಿ ಕಾರ್ಯಕ್ರಮ ನಡೆಯಲಿದೆ. ಈ ಬಗ್ಗೆ ದರ್ಶನ್ ಅವರು ಆಮಂತ್ರಣ ನೀಡಿದ್ದಾರೆ.

ದರ್ಶನ್ ನಟನೆಯ, ತರುಣ್ ಸುಧೀರ್ (Tharun Sudhir) ನಿರ್ದೇಶನದ ‘ಕಾಟೇರ’ ಸಿನಿಮಾ ಡಿಸೆಂಬರ್ 29ರಂದು ರಿಲೀಸ್ ಆಗಲಿದೆ. ಇದು ಪ್ಯಾನ್ ಇಂಡಿಯಾ ಸಿನಿಮಾ ಅಲ್ಲ. ಈ ವಿಚಾರವನ್ನು ದರ್ಶನ್ ಸ್ಪಷ್ಟಪಡಿಸಿದ್ದಾರೆ. ಸಿನಿಮಾ ನೋಡುವ ಕುತೂಹಲ ಅಭಿಮಾನಿಗಳಿಗೆ ಮೂಡಿದೆ. ಈ ಚಿತ್ರದ ಟ್ರೇಲರ್ ಇಂದು (ಡಿಸೆಂಬರ್ 16) ಸಂಜೆ ರಿಲೀಸ್ ಆಗಲಿದೆ. ಹುಬ್ಬಳ್ಳಿಯಲ್ಲಿ ಅದ್ದೂರಿ ಕಾರ್ಯಕ್ರಮ ನಡೆಯಲಿದೆ. ಈ ಬಗ್ಗೆ ದರ್ಶನ್ ಅವರು ಆಮಂತ್ರಣ ನೀಡಿದ್ದಾರೆ. ಹುಬ್ಬಳ್ಳಿಯ ರೈಲ್ವೇ ಸ್ಪೋರ್ಟ್ಸ್ ಗ್ರೌಂಡ್​ನಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ. ರಾಕ್​ಲೈನ್​ವೆಂಕಟೇಶ್​ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published on: Dec 16, 2023 01:35 PM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More