‘ಸಂಗೊಳ್ಳಿ ರಾಯಣ್ಣ’ ಮರು ಬಿಡುಗಡೆ, ಚಿತ್ರಮಂದಿರ ಖಾಲಿ-ಖಾಲಿ: ಅಭಿಮಾನಿಗಳ ಆಕ್ರೋಶ

Updated on: Nov 22, 2024 | 12:16 PM

Darshan Thoogudeepa: ದರ್ಶನ್ ನಟನೆಯ ‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ಸಿನಿಮಾ ಇಂದು (ನವೆಂಬರ್ 22) ಮರು ಬಿಡುಗಡೆ ಆಗಿದೆ. ಆದರೆ ಚಿತ್ರಮಂದಿರಗಳು ಖಾಲಿ ಹೊಡೆಯುತ್ತಿವೆ. ಇದಕ್ಕೆ ದರ್ಶನ್ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದಾರೆ.

ದರ್ಶನ್ ನಟನೆಯ ‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ಸಿನಿಮಾ ಮರು ಬಿಡುಗಡೆ ಆಗಿದೆ. ಆದರೆ ಬಹುತೇಕ ಚಿತ್ರಮಂದಿರಗಳು ಖಾಲಿ ಹೊಡೆಯುತ್ತಿವೆ. ಸಿನಿಮಾಕ್ಕೆ ಸರಿಯಾಗಿ ಪ್ರಚಾರ ಮಾಡಿಲ್ಲ, ಅಭಿಮಾನಿಗಳಿಗೆ ಸರಿಯಾದ ಮಾಹಿತಿ ನೀಡಿಲ್ಲ ಎಂದು ದರ್ಶನ್ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದಾರೆ. ಬುಕ್​ಮೈ ಶೋ ಓಪನ್ ಮಾಡಿದರೆ ಸಿದ್ದಲಿಂಗೇಶ್ವರ ಚಿತ್ರಮಂದಿರದಲ್ಲಿ ಎಲ್ಲ ಟಿಕೆಟ್ ಖಾಲಿ ಆಗಿದೆ ಎಂದು ತೋರಿಸುತ್ತಿದೆ. ಆದರೆ ಇಲ್ಲಿ ನೋಡಿದರೆ ಚಿತ್ರಮಂದಿರ ಖಾಲಿ ಇದೆ. ಯಾರೂ ಜನ ಚಿತ್ರಮಂದಿರಕ್ಕೆ ಬರದೇ ಇರಲಿ ಎಂದೇ ಹೀಗೆ ಮಾಡಲಾಗುತ್ತಿದೆ. ದರ್ಶನ್ ಅವರನ್ನು ತುಳಿಯುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಅವರ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದಾರೆ. ವಿಡಿಯೋ ಇಲ್ಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Nov 22, 2024 11:57 AM
Follow Us
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More