ಜುಲೈ 12ಕ್ಕೆ ದರ್ಶನ್​ ನಟನೆಯ ‘ಶಾಸ್ತ್ರಿ’ ಸಿನಿಮಾ ಮರು ಬಿಡುಗಡೆ; ಏನಿದು ಪ್ಲ್ಯಾನ್?

ಜುಲೈ 12ಕ್ಕೆ ದರ್ಶನ್​ ನಟನೆಯ ‘ಶಾಸ್ತ್ರಿ’ ಸಿನಿಮಾ ಮರು ಬಿಡುಗಡೆ; ಏನಿದು ಪ್ಲ್ಯಾನ್?
| Updated By: ಮದನ್​ ಕುಮಾರ್​

Updated on: Jul 08, 2024 | 8:03 PM

ಮುಚ್ಚಿದ್ದ ಎಷ್ಟೋ ಚಿತ್ರಮಂದಿರಗಳು ‘ಕಾಟೇರ’ ಬಿಡುಗಡೆ ಆದಾಗ ಮತ್ತೆ ಓಪನ್​ ಆದವು. ಈ ವಾರ ಕನ್ನಡದ ಯಾವುದೇ ಸಿನಿಮಾಗಳು ತೆರೆಕಾಣುತ್ತಿಲ್ಲ ಎಂಬ ಕಾರಣಕ್ಕೆ ‘ಶಾಸ್ತ್ರಿ’ ಸಿನಿಮಾವನ್ನು ಮರು-ಬಿಡುಗಡೆ ಮಾಡಲಾಗುತ್ತಿದೆ. ಈ ಬಗ್ಗೆ ವಿತರಕ ವಿ.ಎಂ. ಶಂಕರ್​ ಮಾತನಾಡಿದ್ದಾರೆ. ಈ ಸಿನಿಮಾಗೆ ಈಗ ಜನರು ಯಾವ ರೀತಿ ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ತಿಳಿಯುವ ಕುತೂಹಲ ಮೂಡಿದೆ.

ನಟ ದರ್ಶನ್​ ಮೇಲೆ ಗಂಭೀರ ಆರೋಪ ಎದುರಾಗಿದ್ದು, ಅವರೀಗ ಜೈಲು ವಾಸ ಅನುಭವಿಸುತ್ತಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಅವರು ಎ2 ಆಗಿದ್ದಾರೆ. ಅವರು ಬೇಗ ಜಾಮೀನು ಪಡೆದು ಹೊರಬರಬೇಕು ಎಂದು ಫ್ಯಾನ್ಸ್​ ಬಯಸುತ್ತಿದ್ದಾರೆ. ಈ ನಡುವೆ ‘ಶಾಸ್ತ್ರಿ’ ಸಿನಿಮಾ ಮರು ಬಿಡುಗಡೆ ಮಾಡಲು ಗಾಂಧಿನಗರದಲ್ಲಿ ತಯಾರಿ ನಡೆದಿದೆ. ವಿತಕರ ವಿ.ಎಂ. ಶಂಕರ್​ ಅವರು ಈ ಸಿನಿಮಾವನ್ನು ರೀ-ರಿಲೀಸ್​ ಮಾಡುತ್ತಿದ್ದಾರೆ. ಆದರೆ ಇದು ಸಡನ್​ ಪ್ಲ್ಯಾನ್​ ಅಲ್ಲ ಎಂದು ಅವರು ಹೇಳಿದ್ದಾರೆ. ‘ಈ ವಾರ ಕನ್ನಡದ ಬೇರೆ ಯಾವ ಸಿನಿಮಾ ಕೂಡ ಬಿಡುಗಡೆ ಆಗುತ್ತಿಲ್ಲ. ಹಾಗಾಗಿ ಚಿತ್ರಮಂದಿರದ ಮಾಲೀಕರು ರೀ-ರಿಲೀಸ್​ ಮಾಡಿ ಅಂತ ಮನವಿ ಮಾಡಿಕೊಂಡಿದ್ದಾರೆ. ರಾಜ್ಯಾದ್ಯಂತ 25ರಿಂದ 50 ಚಿತ್ರಮಂದಿರಗಳಲ್ಲಿ ‘ಶಾಸ್ತ್ರಿ’ ಸಿನಿಮಾ ಬಿಡುಗಡೆ ಮಾಡುತ್ತೇವೆ. ಗಲಭೆ ಆಗಬಹುದು ಅಂತ ಕೆಲವು ಚಿತ್ರಮಂದಿರದ ಮಾಲಿಕರು ಯೋಚನೆ ಮಾಡುತ್ತಿದ್ದಾರೆ. ದರ್ಶನ್​ ಜೈಲಿಗೆ ಹೋಗಿದ್ದಕ್ಕೂ ‘ಶಾಸ್ತ್ರಿ’ ಮರು ಬಿಡುಗಡೆ ಮಾಡುತ್ತಿರುವುದಕ್ಕೂ ಯಾವುದೇ ಸಂಬಂಧ ಇಲ್ಲ. 6 ತಿಂಗಳ ಹಿಂದೆಯೇ ಇದಕ್ಕೆ ತಯಾರಿ ಮಾಡಿಕೊಂಡಿದ್ದೆವು’ ಎಂದು ವಿ.ಎಂ. ಶಂಕರ್ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ