‘ರಾಜ್‌ಕುಮಾರ್ ಕಾಲು ಧೂಳಿಗೂ ನಾವು ಸಮ ಅಲ್ಲ’: ದರ್ಶನ್ ಹೀಗೆ ಹೇಳಿದ್ದೇಕೆ?

Edited By:

Updated on: Jan 01, 2024 | 10:05 PM

‘ಚಾಲೆಂಜಿಂಗ್ ಸ್ಟಾರ್’ ದರ್ಶನ್ ಅವರ ಹಿಟ್ ಸಿನಿಮಾಗಳ ಸಾಲಿಗೆ ‘ಕಾಟೇರ’ ಕೂಡ ಸೇರಿಕೊಂಡಿದೆ. ಈ ಚಿತ್ರದಲ್ಲಿನ ಅವರ ಅಭಿನಯಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಚಿತ್ರದ ದೃಶ್ಯವೊಂದರಲ್ಲಿ ದರ್ಶನ್ ಅವರು ಹಿರಣ್ಯ ಕಶಿಪು ಪಾತ್ರದ ಡೈಲಾಗ್ ಹೇಳಿದ್ದು ಹೈಲೈಟ್ ಆಗಿದೆ.

‘ಕಾಟೇರ’ ಸಿನಿಮಾದಲ್ಲಿ ದರ್ಶನ್ (Darshan) ಅವರು ಎರಡು ಶೇಡ್ ಇರುವ ಪಾತ್ರ ಮಾಡಿದ್ದಾರೆ. ಅವರ ಅಭಿನಯಕ್ಕೆ ಪ್ರೇಕ್ಷಕರಿಂದ ಚಪ್ಪಾಳೆ ಸಿಕ್ಕಿದೆ. ಒಂದು ದೃಶ್ಯದಲ್ಲಿ ಅವರು ಹಿರಣ್ಯ ಕಶಿಪು ಪಾತ್ರದ ಡೈಲಾಗ್ ಹೇಳಿರುವುದು ಎಲ್ಲರ ಗಮನ ಸೆಳೆದಿದೆ. ಇದನ್ನು ನೋಡಿದವರಿಗೆ ಡಾ. ರಾಜ್‌ಕುಮಾರ್ (Dr Rajkumar) ನೆನಪಾಗಿದೆ. ಈ ಬಗ್ಗೆ ಕಾಟೇರ’ (Kaatera) ಸಕ್ಸಸ್ ಮೀಟ್‌ನಲ್ಲಿ ಎದುರಾದ ಪ್ರಶ್ನೆಗೆ ದರ್ಶನ್ ಉತ್ತರಿಸಿದ್ದಾರೆ. ‘ಡಾ. ರಾಜ್‌ಕುಮಾರ್ ಅವರ ಹೆಸರು ಹೇಳುವುದಕ್ಕೆ ಅಲ್ಲ, ಅವರ ಕಾಲು ಧೂಳಿಗೂ ನಾವು ಸಮ ಅಲ್ಲ. ಪ್ರಯತ್ನ ಮಾಡಬಹುದು.‌ ಆದರೆ ಅವರು ಮಾಡಿದ್ದರಲ್ಲಿ ಶೇಕಡ 0.001ರಷ್ಟು ಕೂಡ ನಾವು ಮಾಡಿಲ್ಲ’ ಎಂದಿದ್ದಾರೆ ದರ್ಶನ್.

ಇನ್ನಷ್ಟು ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More