‘ಬಾಸ್ ಸಿನಿಮಾ ರಿಲೀಸ್ ಮಾಡಲು ದರ್ಶನ್ ಒಪ್ಪಿದ್ದಾರೆ’: ತನುಷ್ ಶಿವಣ್ಣ

Updated on: Aug 05, 2026 | 9:21 PM

ಬಿಡುಗಡೆಗೂ ಮುನ್ನವೇ ‘ಬಾಸ್’ ಸಿನಿಮಾ ಸಾಕಷ್ಟು ಸದ್ದು ಮಾಡಿದೆ. ಈ ಸಿನಿಮಾದ ರಿಲೀಸ್​ಗೆ ತಡೆ ನೀಡುವಂತೆ ಕೋರಿ ಈ ಮೊದಲು ವಿಜಯಲಕ್ಷ್ಮಿ ದರ್ಶನ್ ಅವರು ಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಅಂತಿಮವಾಗಿ ಅವರು ಈ ಚಿತ್ರದ ಬಿಡುಗಡೆಗೆ ಅನುಮತಿ ನೀಡಿದ್ದಾರೆ. ಈ ಕುರಿತು ಚಿತ್ರದ ನಾಯಕ ನಟ ತನುಷ್ ಶಿವಣ್ಣ ಅವರು ಮಾತನಾಡಿದ್ದಾರೆ.

ಬಿಡುಗಡೆಗೂ ಮುನ್ನವೇ ‘ಬಾಸ್’ ಸಿನಿಮಾ (Boss Movie) ಸಾಕಷ್ಟು ಸದ್ದು ಮಾಡಿದೆ. ಈ ಸಿನಿಮಾದ ರಿಲೀಸ್​ಗೆ ತಡೆ ನೀಡುವಂತೆ ಕೋರಿ ಈ ಮೊದಲು ವಿಜಯಲಕ್ಷ್ಮಿ ದರ್ಶನ್ ಅವರು ಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಅಂತಿಮವಾಗಿ ಅವರು ಈ ಚಿತ್ರದ ಬಿಡುಗಡೆಗೆ ಅನುಮತಿ ನೀಡಿದ್ದಾರೆ. ಈ ಕುರಿತು ಚಿತ್ರದ ನಾಯಕ ನಟ ತನುಷ್ ಶಿವಣ್ಣ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ. ‘ವಿಜಯಲಕ್ಷ್ಮಿ ದರ್ಶನ್ ಅವರು ನಮ್ಮ ಜೊತೆ ಮಾತನಾಡಿದರು. ಈ ಚಿತ್ರದಲ್ಲಿ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಏನಾದರೂ ತೋರಿಸಿದ್ದೀರಾ ಅಂತ ಕೇಳಿದರು. ಅವರ ಪ್ರಶ್ನೆಗಳಿಗೆ ನಾನು ಉತ್ತರ ನೀಡಿದೆ. ಈ ಸಿನಿಮಾ ಬಿಡುಗಡೆ ಆಗಲಿ ಅಂತ ದರ್ಶನ್ ಅವರು ಕೂಡ ಹೇಳಿದ್ದಾರೆ. ಆಗಸ್ಟ್ 7ರಂದು ಬಾಸ್ ಸಿನಿಮಾ ರಿಲೀಸ್ ಆಗಲಿದೆ. ನಿಮ್ಮೆಲ್ಲರ ಆಶೀರ್ವಾದ, ಹಾರೈಕೆ ನಮಗೆ ಬೇಕು’ ಎಂದು ತನುಷ್ ಶಿವಣ್ಣ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More