ವಿಡಿಯೋ: ವೈದ್ಯಕೀಯ ಪರೀಕ್ಷೆಗೆ ಬೌರಿಂಗ್ ಆಸ್ಪತ್ರೆಗೆ ಬಂದ ನಟ ದರ್ಶನ್
ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ತೂಗುದೀಪ ಹಾಗೂ ಅವರ 12 ಸಹಚರರನ್ನು ಬಂಧಿಸಲಾಗಿದೆ. ನ್ಯಾಯಾಲಯಕ್ಕೆ ಹಾಜರುಪಡಿಸುವ ಮುನ್ನ ಬೌರಿಂಗ್ ಆಸ್ಪತ್ರೆಯಲ್ಲಿ ದರ್ಶನ್ಗೆ ವೈದ್ಯಕೀಯ ಪರೀಕ್ಷೆ ಮಾಡಿಸಲಾಗಿದ್ದು, ಇಲ್ಲಿದೆ ವಿಡಿಯೋ.
ಚಿತ್ರದುರ್ಗದ ರೇಣುಕಾ ಸ್ವಾಮಿ (Renuka Swamy) ಹೆಸರಿನ ಯುವಕ ಹತ್ಯೆ ಪ್ರಕರಣಕ್ಕೆ ಸಂಬಂಧಸಿದಂತೆ ನಟ ದರ್ಶನ್ ಅನ್ನು ಬಂಧಿಸಲಾಗಿದೆ. ಜೊತೆಗೆ ಇನ್ನೂ ಹನ್ನೆರಡು ಮಂದಿಯನ್ನು ಬಂಧಿಸಲಾಗಿದೆ. ಬೌರಿಂಗ್ ಆಸ್ಪತ್ರೆಯಲ್ಲಿ ದರ್ಶನ್ ಹಾಗೂ ಕೆಲವರ ಆರೋಗ್ಯ ತಪಾಸಣೆಯನ್ನು ಸಂಜೆ ವೇಳೆಗೆ ಮಾಡಲಾಯ್ತು. ಈ ವೇಳೆ ನಡೆಸಿಕೊಂಡೇ ದರ್ಶನ್ ಅನ್ನು ಪೊಲೀಸರು ಆಸ್ಪತ್ರೆಗೆ ಕರೆತಂದಿದ್ದಾರೆ. ಪ್ರಕರಣದ ಒಟ್ಟು 13 ಆರೋಪಿಗಳಿಗೆ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ಮಾಡಿಸಲಾಗುತ್ತಿದ್ದು, ಇಂದೇ ನ್ಯಾಯಾಲಯಕ್ಕೆ ಹಾಜರುಪಡಿಸಿ, ಪೊಲೀಸರು ವಶಕ್ಕೆ ಅಥವಾ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗುತ್ತದೆ. ನಟಿ ಪವಿತ್ರಾ ಗೌಡ ಅವರಿಗೂ ಸಹ ಬೌರಿಂಗ್ ಆಸ್ಪತ್ರೆಯಲ್ಲಿಯೇ ವೈದ್ಯಕೀಯ ತಪಾಸಣೆ ಮಾಡಿಸಲಾಗಿದೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್ ಸ್ಪೈಡಿ ಕ್ಯಾಚ್ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್

