ವಿಡಿಯೋ: ವೈದ್ಯಕೀಯ ಪರೀಕ್ಷೆಗೆ ಬೌರಿಂಗ್ ಆಸ್ಪತ್ರೆಗೆ ಬಂದ ನಟ ದರ್ಶನ್

Updated on: Jun 11, 2024 | 5:58 PM

ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ತೂಗುದೀಪ ಹಾಗೂ ಅವರ 12 ಸಹಚರರನ್ನು ಬಂಧಿಸಲಾಗಿದೆ. ನ್ಯಾಯಾಲಯಕ್ಕೆ ಹಾಜರುಪಡಿಸುವ ಮುನ್ನ ಬೌರಿಂಗ್ ಆಸ್ಪತ್ರೆಯಲ್ಲಿ ದರ್ಶನ್​ಗೆ ವೈದ್ಯಕೀಯ ಪರೀಕ್ಷೆ ಮಾಡಿಸಲಾಗಿದ್ದು, ಇಲ್ಲಿದೆ ವಿಡಿಯೋ.

ಚಿತ್ರದುರ್ಗದ ರೇಣುಕಾ ಸ್ವಾಮಿ (Renuka Swamy) ಹೆಸರಿನ ಯುವಕ ಹತ್ಯೆ ಪ್ರಕರಣಕ್ಕೆ ಸಂಬಂಧಸಿದಂತೆ ನಟ ದರ್ಶನ್ ಅನ್ನು ಬಂಧಿಸಲಾಗಿದೆ. ಜೊತೆಗೆ ಇನ್ನೂ ಹನ್ನೆರಡು ಮಂದಿಯನ್ನು ಬಂಧಿಸಲಾಗಿದೆ. ಬೌರಿಂಗ್ ಆಸ್ಪತ್ರೆಯಲ್ಲಿ ದರ್ಶನ್​ ಹಾಗೂ ಕೆಲವರ ಆರೋಗ್ಯ ತಪಾಸಣೆಯನ್ನು ಸಂಜೆ ವೇಳೆಗೆ ಮಾಡಲಾಯ್ತು. ಈ ವೇಳೆ ನಡೆಸಿಕೊಂಡೇ ದರ್ಶನ್ ಅನ್ನು ಪೊಲೀಸರು ಆಸ್ಪತ್ರೆಗೆ ಕರೆತಂದಿದ್ದಾರೆ. ಪ್ರಕರಣದ ಒಟ್ಟು 13 ಆರೋಪಿಗಳಿಗೆ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ಮಾಡಿಸಲಾಗುತ್ತಿದ್ದು, ಇಂದೇ ನ್ಯಾಯಾಲಯಕ್ಕೆ ಹಾಜರುಪಡಿಸಿ, ಪೊಲೀಸರು ವಶಕ್ಕೆ ಅಥವಾ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗುತ್ತದೆ. ನಟಿ ಪವಿತ್ರಾ ಗೌಡ ಅವರಿಗೂ ಸಹ ಬೌರಿಂಗ್ ಆಸ್ಪತ್ರೆಯಲ್ಲಿಯೇ ವೈದ್ಯಕೀಯ ತಪಾಸಣೆ ಮಾಡಿಸಲಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More