ದರ್ಶನ್​ಗೆ ಸಿಗಲಿಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?

Updated on: May 15, 2026 | 8:03 PM

ಜಾಮೀನು ಪಡೆಯುವ ನಿರೀಕ್ಷೆಯಲ್ಲಿದ್ದ ನಟ ದರ್ಶನ್ ಅವರಿಗೆ ನಿರಾಸೆ ಆಗಿದೆ. ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಇಂದು (ಮೇ 15) ನ್ಯಾಯಾಲಯದಲ್ಲಿ ವಿಚಾರಣೆ ಹೇಗೆ ನಡೆಯಿತು ಎಂಬುದನ್ನು ಲಾಯರ್ ಸಾಕೇತ್ ಅವರು ವಿವರಿಸಿದ್ದಾರೆ. ಅವರು ಮಾತನಾಡಿದ ವಿಡಿಯೋ ಇಲ್ಲಿದೆ ನೋಡಿ..

ಜಾಮೀನು ಪಡೆಯುವ ನಿರೀಕ್ಷೆಯಲ್ಲಿದ್ದ ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Case) ಆರೋಪಿ, ನಟ ದರ್ಶನ್ ಅವರಿಗೆ ನಿರಾಸೆ ಆಗಿದೆ. ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಇಂದು (ಮೇ 15) ನ್ಯಾಯಾಲಯದಲ್ಲಿ ವಿಚಾರಣೆ ಹೇಗೆ ನಡೆಯಿತು ಎಂಬುದನ್ನು ಲಾಯರ್ ಸಾಕೇತ್ ಅವರು ವಿವರಿಸಿದ್ದಾರೆ. ಅವರು ಮಾತನಾಡಿದ ವಿಡಿಯೋ ಇಲ್ಲಿದೆ. ‘ದರ್ಶನ್ (Darshan Thoogudeepa) ಓರ್ವ ವಿಚಾರಣಾಧೀನ ಕೈದಿ. ಜೈಲಿನಲ್ಲಿ ಬೇರೆ ಕೈದಿಗಳಿಗೆ ಸಿಗುತ್ತಿರುವ ಸವಲತ್ತುಗಳು ತಮಗೆ ಸಿಗುತ್ತಿಲ್ಲ ಎಂದು ಅವರು ಅರ್ಜಿಯಲ್ಲಿ ತಿಳಿಸಿದ್ದರು. ಒಟ್ಟು 272 ಸಾಕ್ಷಿಗಳಿವೆ. ಇನ್ನೂ 150 ಸಾಕ್ಷಿಗಳ ವಿಚಾರಣೆ ಆಗಬೇಕಿದೆ. ಅದರಲ್ಲಿ 60 ಸಾಕ್ಷಿಗಳು ಮುಖ್ಯವಾಗಿವೆ. ಅವುಗಳ ವಿಚಾರಣೆ ನಡೆಯುವ ತನಕ ದರ್ಶನ್ ಅವರಿಗೆ ಜಾಮೀನು ನೀಡಬಾರದು ಎಂದು ರಾಜ್ಯ ಸರ್ಕಾರ ಕೇಳಿಕೊಂಡಿದೆ. ಒಂದು ವರ್ಷದಲ್ಲಿ 60 ಮುಖ್ಯ ಸಾಕ್ಷಿಗಳ ವಿಚಾರಣೆ ಮಾಡಬೇಕು ಎಂದು ಗಡುವು ನೀಡಲಾಗಿದೆ. ಆ ಸಾಕ್ಷಿಗಳ ವಿಚಾರಣೆ ಮುಗಿದ ಬಳಿಕ ಜಾಮೀನು (Bail) ನೀಡಬೇಕೋ ಅಥವಾ ಬೇಡವೋ ಎಂಬುದನ್ನು ಪರಿಗಣಿಸಲಾಗುವುದು ಅಂತ ನ್ಯಾಯಾಲಯ ತಿಳಿಸಿದೆ’ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More