ಕೊಲೆ ಆರೋಪಿ ದರ್ಶನ್ ಅನ್ನು ಬಿಡುಗಡೆ ಮಾಡಿರೆಂದು ಅಭಿಮಾನಿಯ ಹುಚ್ಚಾಟ

Updated on: Aug 22, 2024 | 2:30 PM

Darshan Thoogudeepa: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ತೂಗುದೀಪ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಗುರುವಾರ ದರ್ಶನ್​ರ ಅಭಿಮಾನಿಯೊಬ್ಬ ಕೊರಳಿಗೆ ದರ್ಶನ್ ಹಾಕಿಕೊಂಡು ಜೈಲಿನ ಬಳಿ ಬಂದು ದರ್ಶನ್ ಅನ್ನು ಬಿಡುಗಡೆ ಮಾಡುವಂತೆ ಗಲಾಟೆ ಮಾಡಿದ್ದಾನೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ದರ್ಶನ್ ಬಂಧನವಾಗಿ ಠಾಣೆಯಲ್ಲಿದ್ದಾಗ ಅಭಿಮಾನಿಗಳು ಠಾಣೆಯ ಮುಂದೆ ಜಮಾಯಿಸಿ ಹುಚ್ಚಾಟ ಮೆರೆದಿದ್ದರು. ಬಳಿಕ ಪರಪ್ಪನ ಅಗ್ರಹಾರಕ್ಕೆ ವರ್ಗಾವಣೆ ಮಾಡಿದಾಗ ಅಲ್ಲಿಯೂ ಜಮಾವಣೆಗೊಂಡಿದ್ದರು. ಇತ್ತೀಚೆಗೆ ಜೈಲಿನ ಬಳಿ ಬರುವ ಅಭಿಮಾನಿಗಳ ಸಂಖ್ಯೆ ಕಡಿಮೆ ಆಗಿತ್ತು. ಆದರೆ ಗುರುವಾರ ದರ್ಶನ್​ರ ಅಭಿಮಾನಿಯೊಬ್ಬ, ದರ್ಶನ್ ಚಿತ್ರವನ್ನು ಕೊರಳಿಗೆ ಹಾಕಿಕೊಂಡು ಪರಪ್ಪನ ಅಗ್ರಹಾರ ಜೈಲಿನ ಬಳಿ ಬಂದು ಹುಚ್ಚಾಟ ಮೆರೆದಿದ್ದಾನೆ. ದರ್ಶನ್ ಯಾವುದೇ ತಪ್ಪು ಮಾಡಿಲ್ಲ ಅವರನ್ನು ಬಿಡುಗಡೆ ಮಾಡಬೇಕು ಎಂದಿದ್ದಾನೆ. ಕೊನೆಗೆ ಪೊಲೀಸರು ಆತನನ್ನು ಅಲ್ಲಿಂದ ಜಾಗ ಖಾಲಿ ಮಾಡಿಸಿದ್ದಾರೆ. ಇಲ್ಲಿದೆ ವಿಡಿಯೋ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More