ದರ್ಶನ್ ಫೋಟೋ ಹಿಡಿದು ಪೊಲೀಸ್ ಠಾಣೆ ಎದುರು ಕಾದು ಕುಳಿತ ಅಭಿಮಾನಿ; ಫ್ಯಾನ್ಸ್ಗೆ ಬುದ್ಧಿ ಹೇಳೋದ್ಯಾರು?
ಚಿತ್ರದುರ್ಗದ ರೇಣುಕಾಸ್ವಾಮಿ ಎಂಬುವವರು ಕೊಲೆ ಆಗಿದ್ದಾರೆ. ಪವಿತ್ರಾ ಗೌಡಗೆ ಇವರು ಅಶ್ಲೀಲ ಸಂದೇಶ ಹಾಗೂ ಫೋಟೋ ಕಳುಹಿಸುತ್ತಿದ್ದರು ಎನ್ನಲಾಗಿದೆ. ಈ ಕಾರಣಕ್ಕೆ ದರ್ಶನ್ ಹಾಗೂ ಅವರ ಸಹಚರರು ರೇಣುಕಾಸ್ವಾಮಿಯ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ ಎಂದು ವರದಿ ಆಗಿದೆ
ಕೊಲೆ ಕೇಸ್ನಲ್ಲಿ ನಟ ದರ್ಶನ್ (Darshan) ಅವರು ಜೈಲು ಸೇರಿದ್ದಾರೆ. ಪೊಲೀಸ್ ಠಾಣೆಯ ಎದುರು ಫ್ಯಾನ್ಸ್ ನೆರೆಯುತ್ತಿದ್ದಾರೆ. ‘ಜೈ ಡಿಬಾಸ್’ ಎಂದು ಘೋಷಣೆಗಳನ್ನು ಕೂಗುತ್ತಿದ್ದಾರೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದರ್ಶನ್ ಅವರನ್ನು ಇಡಲಾಗಿದೆ. ಇಳಕಲ್ನಿಂದ ದರ್ಶನ್ ಫೋಟೋ ಹಿಡಿದು ಅಭಿಮಾನಿ ಆಗಮಿಸಿದ್ದಾನೆ. ದರ್ಶನ್ಗಾಗಿ ಈತ ಕಾದು ಕೂತಿದ್ದಾನೆ. ಸೋಶಿಯಲ್ ಮೀಡಿಯಾದಲ್ಲಿ ಅನೇಕರು ಬೆಂಬಲ ಸೂಚಿಸಿದ್ದಾರೆ. ಇದನ್ನು ಕೆಲವರು ಟೀಕೆ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ದರ್ಶನ್ ಅಭಿಮಾನಿಗಳಿಗೆ ಬುದ್ಧಿ ಹೇಳುವ ಕೆಲಸ ಮಾಡಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಅವರನ್ನು ಕೊಲೆ ಮಾಡಿದ ಆರೋಪದಲ್ಲಿ ದರ್ಶನ್ ಒಳ ಹೋಗಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.