ಕೋರ್ಟ್​ ಹಾಲ್​ನಲ್ಲಿ ಅಕ್ಕ-ಪಕ್ಕ ನಿಂತ ದರ್ಶನ್,ಪವಿತ್ರಾ; ಹೊರಬರುವಾಗ ಅಪರೂಪದ ಘಟನೆ

Edited By:

Updated on: May 20, 2025 | 12:49 PM

ಜಾಮೀನು ನೀಡುವಾಗ ಕೋರ್ಟ್ ಕೆಲವು ಷರತ್ತುಗಳನ್ನು ವಿಧಿಸಿತ್ತು. ಅವುಗಳ ಪೈಕಿ ಕೋರ್ಟ್​ಗೆ ಹಾಜರಿ ಹಾಕಬೇಕು ಎಂಬುದು ಕೂಡ ಪ್ರಮುಖ ಷರತ್ತಾಗಿತ್ತು. ಅದರಂತೆ ದರ್ಶನ್, ಪವಿತ್ರಾ ಕೋರ್ಟ್​ಗೆ ಹಾಜರಿ ಹಾಕಿದ್ದಾರೆ. ಕೋರ್ಟ್​ನಿಂದ ಹೊರ ಬರುವಾಗ ದರ್ಶನ್​ ಕೈನ ಪವಿತ್ರಾ ಹಿಡಿದುಕೊಂಡಿದ್ದರು ಎಂದು ವರದಿ ಆಗಿದೆ.

ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಪವಿತ್ರಾ ಗೌಡ (Pavitra Gowda) ಅವರು ಎ1 ಆರೋಪಿ ಆಗಿದ್ದಾರೆ. ದರ್ಶನ್ ಎ2 ಆರೋಪಿ ಎನಿಸಿಕೊಂಡಿದ್ದಾರೆ. ಇಂದು ಪ್ರಕರಣದ ವಿಚಾರಣೆ ಬೆಂಗಳೂರಿನ 57ನೇ ಸಿಸಿಹೆಚ್​ ಕೋರ್ಟ್​ನಲ್ಲಿ ನಡೆದಿದೆ. ಈ ವೇಳೆ ಒಂದಷ್ಟು ಅಪರೂಪದ ಘಟನೆಗಳು ನಡೆದವು. ಕೋರ್ಟ್​ ಹಾಲ್​ನಲ್ಲಿ ದರ್ಶನ್ ಹಾಗೂ ಪವಿತ್ರಾ ಗೌಡ ಅವರು ಕೋರ್ಟ್​ನಲ್ಲಿ ಅಕ್ಕ-ಪಕ್ಕದಲ್ಲಿ ನಿಂತಿದ್ದರು. ಅಷ್ಟೇ ಅಲ್ಲ, ಕೋರ್ಟ್​ನಿಂದ ಹೊರ ಬರುವಾಗ ದರ್ಶನ್​ ಕೈನ ಪವಿತ್ರಾ ಹಿಡಿದುಕೊಂಡಿದ್ದರು.

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ 17 ಜನರನ್ನು ಪೊಲೀಸರು ಬಂಧಿಸಿದ್ದರು. ಈಗಾಗಲೇ ಎಲ್ಲಾ ಆರೋಪಿಗಳಿಗೆ ಜಾಮೀನು ಸಿಕ್ಕಿದೆ. ಜಾಮೀನು ನೀಡುವಾಗ ಕೋರ್ಟ್ ಕೆಲವು ಷರತ್ತುಗಳನ್ನು ವಿಧಿಸಿತ್ತು. ಅವುಗಳ ಪೈಕಿ ಕೋರ್ಟ್​ಗೆ ಹಾಜರಿ ಹಾಕಬೇಕು ಎಂಬುದು ಕೂಡ ಪ್ರಮುಖ ಷರತ್ತಾಗಿತ್ತು. ಅದರಂತೆ ಪವನ್ ಹೊರತುಪಡಿಸಿ ಮತ್ತೆಲ್ಲಾ ಆರೋಪಿಗಳು ಕೋರ್ಟ್​ಗೆ ಹಾಜರಿ ಹಾಕಿದ್ದಾರೆ.

ಕೋರ್ಟ್​ನಲ್ಲಿ ದರ್ಶನ್ ಹಾಗೂ ಪವಿತ್ರಾ ಅಕ್ಕ-ಪಕ್ಕ ಇದ್ದರು. ಕೋರ್ಟ್​ನಿಂದ ಹೊರಹೋಗುವಾಗ ಜನ ಜಂಗುಳಿ ಇತ್ತು. ಈ ಕಾರಣಕ್ಕೆ ದರ್ಶನ್ ಹಾಗೂ ಪವಿತ್ರಾ ಕೈ ಕೈ ಹಿಡಿದು ಬಂದ ಬಗ್ಗೆ ವರದಿ ಆಗಿದೆ. ಇನ್ನು, ಪವಿತ್ರಾ ಹಠ ಮಾಡಿದ್ದಕ್ಕೆ ದರ್ಶನ್ ಅವರು ತಮ್ಮ ಮೊಬೈಲ್​ ಸಂಖ್ಯೆಯನ್ನೂ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಜುಲೈ 10ಕ್ಕೆ ವಿಚಾರಣೆ ಮುಂದೂಡಲಾಗಿದೆ. ಅಂದು ಎಲ್ಲ ಆರೋಪಿಗಳು ಹಾಜರಿ ಹಾಕಲು ಕೋರ್ಟ್​ ಸೂಚಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: May 20, 2025 12:25 PM
Loading...
Unable to load recommendations.
Follow Us
ಪ್ರಜ್ವಲ್​ ಕುಮಾರ್ ಎನ್​ ವೈ

2017 ಜೂನ್​ನಿಂದ ಟಿವಿ9 ಕನ್ನಡ ವಾಹಿನಿಯಲ್ಲಿ ಕ್ರೈಮ್ ವರದಿಗಾರನಾಗಿ ವೃತ್ತಿ. ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿ ಮಾಡುತಿದ್ದೇನೆ. ಮೂಲತಃ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನವನಾಗಿದ್ದು ಹಾಸನ ಮತ್ತು ತುಮಕೂರಿನಲ್ಲಿ ವಿದ್ಯಾಭ್ಯಾಸ ಮುಗಿಸಿದ ನಂತರ ಒಂದು ವರ್ಷ ಜನಶ್ರೀ ಸುದ್ದಿ ವಾಹಿನಿಯಲ್ಲಿ ಕ್ರೈಮ್ ರಿಪೋರ್ಟರ್ ಆಗಿ ಕೆಲಸ ಮಾಡಿ ನಂತರ 2017 ರಿಂದ ಇಲ್ಲಿಯವರೆಗೆ ಟಿವಿ9 ನಲ್ಲಿ ಕೆಲಸ ಮಾಡುತಿದ್ದೇನೆ.

Read More