‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’: ವಕೀಲರ ಮಾತು

Updated on: Jul 04, 2024 | 8:24 AM

ದರ್ಶನ್ ಅವರನ್ನು ಬಂಧಿಸಿ ತಿಂಗಳಾಗುತ್ತಾ ಬಂದಿದೆ. ಮೊದಲು ಕೆಲವು ದಿನ ದರ್ಶನ್ ಅವರನ್ನು ತೀವ್ರವಾಗಿ ವಿಚಾರಣೆ ಮಾಡಲಾಯಿತು. ಆ ಬಳಿಕ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಈಗ ದರ್ಶನ್ ಅವರು ಕೇಂದ್ರ ಕಾರಾಗೃಹದಲ್ಲಿ ಕಂಬಿ ಎಣಿಸುತ್ತಿದ್ದಾರೆ. ಅವರು ಜೈಲಿನಲ್ಲಿ ಸಾಕಷ್ಟು ನೋವಿನಲ್ಲಿದ್ದಾರಂತೆ.

ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್ ಅವರು ಅರೆಸ್ಟ್ ಆಗಿದ್ದಾರೆ. ಅವರು ಸದ್ಯ ಕೇಂದ್ರ ಕಾರಾಗೃಹದಲ್ಲಿದ್ದಾರೆ. ನಿತ್ಯವೂ ಅವರು ಕಂಬಿಗಳ ಮಧ್ಯೆ ಸಮಯ ಕಳೆಯಬೇಕಿದೆ. ದರ್ಶನ್ ಅವರಿಗೆ ಜೈಲುವಾಸ ನರಕಯಾತನೆ ಅನಿಸುತ್ತಿದೆ. ಈ ಬಗ್ಗೆ ಅವರ ಪರ ವಕೀಲರು ಮಾತನಾಡಿದ್ದಾರೆ. ‘ದರ್ಶನ್ ಅವರು ಬೇಸರದಲ್ಲಿದ್ದಾರೆ. ಅವರಿಗೆ ಸಾಕಷ್ಟು ನೋವಿದೆ. ಅವರು ಸಾಕಷ್ಟು ಕಷ್ಟಪಟ್ಟು ಸ್ಟಾರ್​ಪಟ್ಟ ಪಡೆದಿದ್ದಾರೆ. ಈಗ ಇಂಥ ಆರೋಪ ಬಂದಿದ್ದಕ್ಕೆ ಅವರಿಗೆ ನೋವಿದೆ. ಅವರು ಹೊರಗೆ ಬಂದೇ ಬರುತ್ತಾರೆ. ಸಿನಿಮಾ ಮಾಡಿಯೇ ಮಾಡುತ್ತಾರೆ. ಅವರ ಅಭಿಮಾನಿಗಳು ಇಟ್ಟಿರೋ ಗೌರವದಿಂದ ಮತ್ತೊಂದು ಹಂತಕ್ಕೆ ಹೋಗುತ್ತಾರೆ’ ಎಂದಿದ್ದಾರೆ ವಕೀಲರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More