AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇದೊಂದು ಬಾರಿ ಕ್ಷಮಿಸಿಬಿಡಿ’; ಅಭಿಮಾನಿಗಳಿಗೆ ದರ್ಶನ್ ವಿಡಿಯೋ ಸಂದೇಶ

‘ಇದೊಂದು ಬಾರಿ ಕ್ಷಮಿಸಿಬಿಡಿ’; ಅಭಿಮಾನಿಗಳಿಗೆ ದರ್ಶನ್ ವಿಡಿಯೋ ಸಂದೇಶ

ರಾಜೇಶ್ ದುಗ್ಗುಮನೆ
|

Updated on:Feb 08, 2025 | 10:24 AM

Share

ನಟ ದರ್ಶನ್ ಅವರು ‘ನನ್ನ ಪ್ರೀತಿಯ ಸೆಲೆಬ್ರಿಟಿಗಳಿಗೆ ನನ್ನ ಪ್ರೀತಿಯ ಮನವಿ ಈ ವರ್ಷ ನನ್ನ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ ಕ್ಷಮೆ ಇರಲಿ’ ಎಂದು ಟ್ವಿಟರ್​ನಲ್ಲಿ ಬರೆದುಕೊಂಡಿದ್ದಾರೆ. ಆ ಸಂದರ್ಭದ ವಿಡಿಯೋನ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಕ್ಷಮೆ ಕೇಳಿದ್ದಾರೆ. ಆ ಬಗ್ಗೆ ಇಲ್ಲಿದೆ ವಿಡಿಯೋ.

ಫೆಬ್ರವರಿ 16ರಂದು ನಟ ದರ್ಶನ್ ಜನ್ಮದಿನ. ಈ ವರ್ಷ ಅವರು ಬರ್ತ್​ಡೇನ ಆಚರಿಸಿಕೊಳ್ಳಲ್ಲ ಎಂದು ಹೇಳಿದ್ದಾರೆ. ಇದಕ್ಕೆ ಕಾರಣ ಏನು ಎಂಬುದನ್ನು ಅವರು ವಿವರಿಸಿದ್ದಾರೆ. ‘ನನಗೆ ಬೆನ್ನು ನೋವು ಇದೆ. ತುಂಬಾ ಹೊತ್ತು ನಿಲ್ಲೋಕೆ ಆಗಲ್ಲ. ಈ ಕಾರಣಕ್ಕೆ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ. ಇದೊಂದು ವರ್ಷ ಕ್ಷಮಿಸಿಬಿಡಿ. ನಿಮಗೆ ಧನ್ಯವಾದ ಹೇಳಬೇಕು ಎನ್ನುವ ಆಸೆ ನನಗೂ ಇದೆ’ ಎಂದು ಅವರು ಕೋರಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Feb 08, 2025 10:23 AM