ಸುಮಲತಾಗೋಸ್ಕರ ಕೈ ಸರ್ಜರಿ ಮುಂದೂಡಿಕೊಂಡ ದರ್ಶನ್

Updated on: Apr 03, 2024 | 1:11 PM

‘ನಾನು ಈಗಾಗಲೇ ಆಪರೇಷನ್ ಮಾಡಿಸಿಕೊಳ್ಳಬೇಕಿತ್ತು. ಆದರೆ, ಅಮ್ಮನಿಗೆ ಡೇಟ್ಸ್ ಕೊಟ್ಟಿದ್ದೇನೆ. ಅದನ್ನು ಮುಗಿಸಿ ಬರ್ತೀನಿ. ರಾತ್ರಿ ವೇಳೆಗೆ ಆಸ್ಪತ್ರೆಗೆ ಅಡ್ಮಿಟ್ ಆಗ್ತೀನಿ. ನಾಳೆ ಆಪರೇಷನ್ ಮಾಡಿಸಿಕೊಳ್ಳುತ್ತೇನೆ’ ಎಂದರು ದರ್ಶನ್.

ಇತ್ತೀಚೆಗೆ ‘ಡೆವಿಲ್’ ಸಿನಿಮಾ ಶೂಟಿಂಗ್ ವೇಳೆ ನಟ ದರ್ಶನ್ (Darshan) ಅವರು ಕೈಗೆ ಪೆಟ್ಟಾಗಿದೆ. ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಿದೆ. ಈಗಾಗಲೇ ಅವರು ಸರ್ಜರಿ ಮಾಡಿಸಿಕೊಳ್ಳಬೇಕಿತ್ತು. ಆದರೆ, ಅವರು ಅದನ್ನು ಮುಂದೂಡಿಕೊಂಡಿದ್ದಾರೆ. ಸುಮಲತಾ ಅಂಬರೀಷ್ ಅವರು ತಮ್ಮ ರಾಜಕೀಯ ನಿಲುವನ್ನು ತಿಳಿಸಲು ಮಂಡ್ಯದಲ್ಲಿ ಸಾರ್ವಜನಿಕ ಸಭೆ ಕರೆದಿದ್ದಾರೆ. ಸುಮಲತಾ ಜೊತೆ ದರ್ಶನ್​, ಅಭಿಷೇಕ್ ಅಂಬರೀಷ್ ಕೂಡ ಇದ್ದರು. ದರ್ಶನ್ ಅವರು ವೇದಿಕೆ ಏರಿ ಮಾತನಾಡಿದ್ದಾರೆ. ‘ನಾನು ಈಗಾಗಲೇ ಆಪರೇಷನ್ ಮಾಡಿಸಿಕೊಳ್ಳಬೇಕಿತ್ತು. ಆದರೆ, ಅಮ್ಮನಿಗೆ ಡೇಟ್ಸ್ ಕೊಟ್ಟಿದ್ದೇನೆ. ಅದನ್ನು ಮುಗಿಸಿ ಬರ್ತೀನಿ. ರಾತ್ರಿ ವೇಳೆಗೆ ಆಸ್ಪತ್ರೆಗೆ ಅಡ್ಮಿಟ್ ಆಗ್ತೀನಿ. ನಾಳೆ ಆಪರೇಷನ್ ಮಾಡಿಸಿಕೊಳ್ಳುತ್ತೇನೆ’ ಎಂದರು ದರ್ಶನ್.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More