ದರ್ಶನ್ ತೂಗುದೀಪ: ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲ್ಗೆ ಹೇಗೆ ಶಿಫ್ಟ್ ಮಾಡಲಾಗುತ್ತಿದೆ?
Darshan Thoogudeepa: ರೇಣುಕಾ ಸ್ವಾಮಿ ಕೊಲೆ ಆರೋಪಿ ದರ್ಶನ್ಗೆ ರಾಜಾತಿಥ್ಯ ನೀಡಲಾಗುತ್ತಿತ್ತು ಎಂಬ ಕೇಸ್ಗೆ ಸಂಬಂಧಿಸಿದಂತೆ ನಟ ದರ್ಶನ್ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿಗೆ ಶಿಫ್ಟ್ ಮಾಡಲಾಗುತ್ತಿದೆ. ಮುಂಜಾನೆ 4.30ರ ಸುಮಾರಿಗೆ ಪರಪ್ಪನ ಅಗ್ರಹಾರ ಜೈಲಿನಿಂದ ದರ್ಶನ್ ಅವರನ್ನು ಪೊಲೀಸರು ಕರೆದೊಯ್ದಿದ್ದಾರೆ.
ನಟ ದರ್ಶನ್ ಅವರು ಇಂದು (ಆಗಸ್ಟ್ 29) ಮುಂಜಾನೆಯೇ ಬೆಂಗಳೂರಿನಿಂದ ಬಳ್ಳಾರಿಗೆ ಶಿಫ್ಟ್ ಆಗುತ್ತಿದ್ದಾರೆ. ಮುಂಜಾನೆ 4:30ರ ಸುಮಾರಿಗೆ ಅವರನ್ನು ಪರಪ್ಪನ ಅಗ್ರಹಾರದಿಂದ ಕರೆದುಕೊಂಡು ಹೋಗಲಾಗಿದೆ. ಅವರು ಬಳ್ಳಾರಿ ತಲುಪೋದು 10 ಗಂಟೆ ಆಗಬಹುದು ಎನ್ನಲಾಗುತ್ತಿದೆ. ದರ್ಶನ್ ಕಾಣಬಾರದು ಎನ್ನುವ ಕಾರಣಕ್ಕೆ ಬೊಲೆರೋ ಕಾರಿನ ಒಳಗೆ ಕರ್ಟನ್ ಹಾಕಲಾಗಿದೆ. ಈ ದೃಶ್ಯವನ್ನು ಟಿವಿ9 ಕನ್ನಡ ಸೆರೆ ಹಿಡಿದಿದೆ. ಜೈಲಿನ ನಿಯಮ ಉಲ್ಲಂಘನೆ ಮಾಡಿದ ಆರೋಪ ದರ್ಶನ್ ಮೇಲೆ ಇದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published On - 7:04 am, Thu, 29 August 24