AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಡುಗಡೆಗೂ ಮೊದಲೇ ಬಹುಕೋಟಿ ರೂಪಾಯಿ ಗಳಿಸಿದ ‘ದಿ ಡೆವಿಲ್’ ಸಿನಿಮಾ

ಬಿಡುಗಡೆಗೂ ಮೊದಲೇ ಬಹುಕೋಟಿ ರೂಪಾಯಿ ಗಳಿಸಿದ ‘ದಿ ಡೆವಿಲ್’ ಸಿನಿಮಾ

ಮದನ್​ ಕುಮಾರ್​
|

Updated on: Dec 09, 2025 | 8:30 PM

Share

ದರ್ಶನ್ ಅಭಿನಯದ ‘ದಿ ಡೆವಿಲ್’ ಚಿತ್ರ ಡಿ.11ರಂದು ರಿಲಿಸ್ ಆಗುತ್ತಿದೆ. ಈಗಾಗಲೇ ಮುಂಗಡ ಟಿಕೆಟ್ ಬುಕಿಂಗ್ ಆರಂಭ ಆಗಿದ್ದು, ಲಕ್ಷಾಂತರ ಟಿಕೆಟ್​ ಸೋಲ್ಡ್ ಔಟ್ ಆಗಿವೆ. ಆ ಮೂಲಕ ಭರ್ಜರಿ ಕಲೆಕ್ಷನ್ ಆಗಿದೆ. ಮೊದಲ ದಿನದ ಟಿಕೆಟ್ ಬುಕಿಂಗ್​​ನಿಂದಲೇ 4 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್ ಆಗಿದೆ.

‘ಚಾಲೆಂಜಿಂಗ್ ಸ್ಟಾರ್’ ದರ್ಶನ್ ನಟನೆಯ ‘ದಿ ಡೆವಿಲ್’ (The Devil) ಸಿನಿಮಾ ಡಿಸೆಂಬರ್ 11ರಂದು ಬಿಡುಗಡೆ ಆಗುತ್ತಿದೆ. ಈಗಾಗಲೇ ಮುಂಗಡ ಟಿಕೆಟ್ ಬುಕಿಂಗ್ ಶುರುವಾಗಿದ್ದು, ಲಕ್ಷಾಂತರ ಟಿಕೆಟ್​ ಸೋಲ್ಡ್ ಔಟ್ ಆಗಿವೆ. ಇದರಿಂದಾಗಿ ಭರ್ಜರಿ ಕಲೆಕ್ಷನ್ ಆಗಿದೆ. ಮೊದಲ ದಿನದ ಟಿಕೆಟ್ ಬುಕಿಂಗ್​​ನಿಂದಲೇ 4 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಆಗಿದೆ ಎಂಬ ಮಾಹಿತಿ ಇದೆ. ಈ ಸಿನಿಮಾಗೆ ಪ್ರಕಾಶ್ ವೀರ್ ಅವರು ನಿರ್ದೇಶನ ಮಾಡಿದ್ದಾರೆ. ದರ್ಶನ್ (Darshan Thoogudeepa) ಜೊತೆ ರಚನಾ ರೈ, ಶರ್ಮಿಳಾ ಮಾಂಡ್ರೆ, ಅಚ್ಯುತ್ ಕುಮಾರ್, ವಿನಯ್ ಗೌಡ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಚಿತ್ರಮಂದಿರಗಳ ಎದುರು ದರ್ಶನ್ ಅವರ ಕಟೌಟ್ ನಿಲ್ಲಿಸಲಾಗಿದೆ. ಬಿಡುಗಡೆಗೂ ಮೊದಲೇ ಅಭಿಮಾನಿಗಳು ಪಟಾಕಿ ಹೊಡೆದು ಸಂಭ್ರಮಿಸುತ್ತಿದ್ದಾರೆ. ಅಭಿಮಾನಿಗಳ ಸಂಭ್ರಮ ಹೇಗಿದೆ ಎಂಬುದರ ಝಲಕ್ ಈ ವಿಡಿಯೋದಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.