ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ನಟ ದರ್ಶನ್ ಅವರು ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಬಂಧನಕ್ಕೆ ಒಳಗಾದರು. ಈಗ ಅವರು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ. ಈ ಮಧ್ಯೆ ಅವರು ಸಿನಿಮಾಗೆ ಬಂದಿದ್ದಾರೆ. ಧನ್ವೀರ್ ನಟನೆಯ ‘ವಾಮನ’ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದ ಪ್ರೀಮಿಯರ್ ಶೋ ವೇಳೆ ಒಂದು ಘಟನೆ ನಡೆದಿದೆ.
ದರ್ಶನ್ ಅವರು ರೇಣುಕಾ ಸ್ವಾಮಿ (Renuka Swamy) ಕೊಲೆ ಕೇಸ್ನ ಆರೋಪಿ. ಹೀಗಾಗಿ ಅವರು ಮಾಧ್ಯಮಗಳ ಎದುರು ಬಂದಾಗ ಅವರಿಗೆ ಈ ಬಗ್ಗೆ ಪ್ರಶ್ನೆ ಎದುರಾಗೋದು ಸಹಜ. ಈ ಕಾರಣಕ್ಕೆ ಅವರು ಇದನ್ನು ಅವಾಯ್ಡ್ ಮಾಡುತ್ತಿದ್ದಾರೆ. ದರ್ಶನ್ ಆಪ್ತ ಧನ್ವೀರ್ ಅವರ ‘ವಾಮನ’ ಸಿನಿಮಾ ವೀಕ್ಷಣೆಗೆ ಬಂದಿದ್ದರು. ವಿಶೇಷ ಶೋ ಮುಗಿದ ಬಳಿಕ ಅವರು ಮಾಧ್ಯಮಗಳಿಗೆ ಎದುರಾದರು. ಈ ವೇಳೆ ಧನ್ವೀರ್ ಜೊತೆ ಸಿನಿಮಾ ಮಾಡೋ ಬಗ್ಗೆ ಸೂಚನೆ ಕೊಟ್ಟಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Apr 10, 2025 01:01 PM
Latest Videos