ದರ್ಶನ್​ಗೆ ಕೆಟ್ಟ ಸಮಯ ನಡೆಯುತ್ತಿದೆ, ಫೆಬ್ರವರಿಗೆ ಸರಿಹೋಗುತ್ತೆ: ಕೆ ಮಂಜು ಭವಿಷ್ಯ

ದರ್ಶನ್​ಗೆ ಕೆಟ್ಟ ಸಮಯ ನಡೆಯುತ್ತಿದೆ, ಫೆಬ್ರವರಿಗೆ ಸರಿಹೋಗುತ್ತೆ: ಕೆ ಮಂಜು ಭವಿಷ್ಯ

ಮಂಜುನಾಥ ಸಿ.
|

Updated on: Sep 13, 2024 | 6:29 PM

Darshan Thoogudeepa: ದರ್ಶನ್ ತೂಗುದೀಪ ಪ್ರಸ್ತುತ ಜೈಲಿನಲ್ಲಿದ್ದು ಅವರಿಗೆ ಅಡ್ವಾನ್ಸ್ ಕೊಟ್ಟಿದ್ದ ಕೆಲವು ನಿರ್ಮಾಪಕರು ತೀವ್ರ ಆತಂಕದಲ್ಲಿದ್ದಾರೆ. ಈ ಬಗ್ಗೆ ಮಾತನಾಡಿರುವ ನಿರ್ಮಾಪಕ ಕೆ ಮಂಜು, ದರ್ಶನ್ ಬಗ್ಗೆ ಭವಿಷ್ಯ ನುಡಿದಿದ್ದಾರೆ.

‘ಕಾಟೇರ’ ಸಿನಿಮಾ ಗೆದ್ದು ಸಾಲು-ಸಾಲು ಸಿನಿಮಾ ಅವಕಾಶಗಳು ಸಿಗುತ್ತಿರುವ ಹೊತ್ತಿನಲ್ಲಿ ನಟ ದರ್ಶನ್ ಜೈಲು ಪಾಲಾಗಿದ್ದಾರೆ. ದರ್ಶನ್ ಜೈಲು ಸೇರಿದ್ದರಿಂದ ಕೆಲವು ನಿರ್ಮಾಪಕರು ಆತಂಕಕ್ಕೆ ಒಳಗಾಗಿದ್ದಾರೆ. ಈ ಬಗ್ಗೆ ಮಾತನಾಡಿರುವ ನಿರ್ಮಾಪಕ ಕೆ ಮಂಜು, ದರ್ಶನ್ ಗೆ ಸುಮಾರು 8-10 ಜನ ನಿರ್ಮಾಪಕರು ಅಡ್ವಾನ್ಸ್ ಕೊಟ್ಟಿದ್ದಾರೆ ಎಂಬ ಬಗ್ಗೆ ಮಾಹಿತಿ ಇದೆ. ದರ್ಶನ್​ಗೆ ಈಗ ಕೆಟ್ಟಕಾಲ, ಗ್ರಹಚಾರ ಸರಿಯಿಲ್ಲ, ಫೆಬ್ರವರಿಗೆ ಎಲ್ಲವೂ ಸರಿ ಹೋಗುತ್ತದೆ ಎಂದಿದ್ದಾರೆ. ಮಾತ್ರವಲ್ಲದೆ ದರ್ಶನ್ ಹೊರಬಂದ ಮೇಲೆ ಯಾರಿಗೆ ಅನ್ಯಾಯವಾಗಿದೆಯೋ ಅವರಿಗೆ ನ್ಯಾಯ ಒದಗಿಸಿಕೊಡುತ್ತಾರೆ, ಪರಿಹಾರ ಮಾಡಿಕೊಡುತ್ತಾರೆ ಎಂಬ ನಂಬಿಕೆ ನನಗೆ ಇದೆ’ ಎಂದಿದ್ದಾರೆ. ಇನ್ನೂ ಕೆಲವು ವಿಷಯಗಳನ್ನು ಕೆ ಮಂಜು ದರ್ಶನ್ ಬಗ್ಗೆ ಮಾತನಾಡಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ