‘ನನ್ನ ತಮ್ಮನ ಮದುವೆಗೆ ದರ್ಶನ್ ಬರ್ತಾನೆ’; ರಕ್ಷಿತಾ ಪ್ರೇಮ್

Updated on: Feb 03, 2025 | 8:33 AM

ರಕ್ಷಿತಾ ಪ್ರೇಮ್ ಅವರ ಸಹೋದರ ರಾಣಾ ವಿವಾಹ ಆಗುತ್ತಿದ್ದಾರೆ. ಇದರಿಂದ ಅವರ ಮನೆಯಲ್ಲಿ ಮದುವೆಯ ಸಂಭ್ರಮ ಮನೆ ಮಾಡಿದೆ. ಏಕ್ ಲವ್ ಯಾ’ ಖ್ಯಾತಿಯ ನಟ ರಾಣಾ ಈಗ ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ರಾಣಾ ಮದುವೆ ಆಗುತ್ತಿರುವ ಹುಡುಗಿಯ ಹೆಸರು ಕೂಡ ರಕ್ಷಿತಾ.

ರಕ್ಷಿತಾ ಹಾಗೂ ದರ್ಶನ್ ಒಟ್ಟಾಗಿ ಸಿನಿಮಾ ಮಾಡಿದ್ದಾರೆ. ಇಬ್ಬರ ಮಧ್ಯೆ ಒಳ್ಳೆಯ ಬಾಂಧವ್ಯ ಇದೆ. ಈಗ ರಕ್ಷಿತಾ ಸಹೋದರ ರಾಣಾ ವಿವಾಹ ಆಗುತ್ತಿದ್ದಾರೆ. ಇದಕ್ಕೆ ದರ್ಶನ್​ಗೂ ಆಹ್ವಾನ ಕೊಟ್ಟಿರೋದಾಗಿ ರಕ್ಷಿತಾ ಹೇಳಿದ್ದಾರೆ. ‘ನಾನು ದರ್ಶನ್ ಹಾಗೂ ವಿಜಿ (ವಿಜಯಲಕ್ಷ್ಮೀ) ಇಬ್ಬರಿಗೂ ಆಮಂತ್ರಣ ಕೊಟ್ಟಿದ್ದೇನೆ. ಅವನು ಬರ್ತೀನಿ ಅಂದಿದ್ದಾನೆ. ಅವನು ಮದುವೆಗೆ ಬಂದೇ ಬರ್ತಾನೆ’ ಎಂದು ರಕ್ಷಿತಾ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More