ಸದ್ಯಕ್ಕೆ ಜಾಮೀನಿಗೆ ಅರ್ಜಿ ಹಾಕಲ್ಲ ನಟ ದರ್ಶನ್: ವಕೀಲರಿಂದ ಮಾಹಿತಿ
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ತೂಗುದೀಪ ಬಂಧನವಾಗಿ ಮೂರು ತಿಂಗಳಾಗಿವೆ. ಪೊಲೀಸರು ಆರೋಪ ಪಟ್ಟಿ ಸಲ್ಲಿಸಿದ್ದಾಗಿದೆ. ಕೆಲ ಆರೋಪಿಗಳು ಈಗಾಗಲೇ ಜಾಮೀನು ಅರ್ಜಿ ಸಲ್ಲಿಸಲು ತಯಾರಾಗಿದ್ದಾರೆ. ಆದರೆ ದರ್ಶನ್ ಸದ್ಯಕ್ಕೆ ಜಾಮೀನಿಗೆ ಅರ್ಜಿ ಸಲ್ಲಿಸುವುದಿಲ್ಲವಂತೆ.
ರೇಣುಕಾ ಸ್ವಾಮಿ ಕೊಲೆ ಆರೋಪದಲ್ಲಿ ನಟ ದರ್ಶನ್ ತೂಗುದೀಪ ಬಂಧನವಾಗಿ ಮೂರು ತಿಂಗಳಾಗಿವೆ. ಇತ್ತೀಚೆಗಷ್ಟೆ ಪೊಲೀಸರು ಪ್ರಕರಣದ ಆರೋಪ ಪಟ್ಟಿಯನ್ನು ಸಲ್ಲಿಸಿದ್ದಾರೆ. ಆರೋಪ ಪಟ್ಟಿ ಸಲ್ಲಿಸಿದ ಬಳಿಕೆ ಕೆಲವು ಆರೋಪಿಗಳು ಜಾಮೀನು ಅರ್ಜಿ ಸಲ್ಲಿಸಲು ಸಿದ್ಧರಾಗಿದ್ದಾರೆ. ಆರೋಪ ಪಟ್ಟಿ ಸಲ್ಲಿಕೆಗೂ ಮುಂಚೆಯೇ ಕೆಲವರು ಜಾಮೀನು ಅರ್ಜಿ ಸಲ್ಲಿಸಿದ್ದರು. ದರ್ಶನ್ ಸಹ ಇದೇ ವಾರದಲ್ಲಿ ಜಾಮೀನು ಅರ್ಜಿ ಸಲ್ಲಿಸಲಿದ್ದಾರೆ ಎನ್ನಲಾಗಿತ್ತು. ಆದರೆ ಅದು ಸುಳ್ಳಾಗಿದೆ. ಇಂದು (ಸೆಪ್ಟೆಂಬರ್ 12) ದರ್ಶನ್ ಅನ್ನು ನೋಡಲು ಬಳ್ಳಾರಿ ಜೈಲಿಗೆ ಬಂದಿದ್ದ ಅವರ ಪರ ವಕೀಲರು ಮಾಧ್ಯಮಗಳೊಟ್ಟಿಗೆ ಮಾತನಾಡಿ, ಪ್ರಕರಣದ ವಿಚಾರವಾಗಿ ದರ್ಶನ್ ಅನ್ನು ಚರ್ಚಿಸಲಾಗಿದೆ, ನಾವು ಆರೋಪ ಪಟ್ಟಿ ಓದುತ್ತಿದ್ದೇವೆ, ದರ್ಶನ್ ಈಗಲೇ ಜಾಮೀನಿಗೆ ಅರ್ಜಿ ಸಲ್ಲಿಸುವುದಿಲ್ಲ’ ಎಂದಿದ್ದಾರೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ