ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್

Updated on: Apr 09, 2025 | 10:49 PM

ಧನ್ವೀರ್ ಗೌಡ ಅವರು ನಟಿಸಿದ ‘ವಾಮನ’ ಸಿನಿಮಾದ ವಿಶೇಷ ಪ್ರದರ್ಶನ ಬೆಂಗಳೂರಿನ ಜಿಟಿ ಮಾಲ್​ನಲ್ಲಿ ನಡೆದಿದೆ. ಸೆಲೆಬ್ರಿಟಿಗಳಗಾಗಿ ಆಯೋಜಿಸಿದ್ದ ಪ್ರೀಮಿಯರ್ ಶೋನಲ್ಲಿ ದರ್ಶನ್ ಕೂಡ ಭಾಗಿ ಆಗಿದ್ದಾರೆ. ಅವರು ಬಂದು ಕಾರಿನಿಂದ ಇಳಿದ ಕೂಡಲೇ ಅಭಿಮಾನಿಗಳು ಮುತ್ತಿಕೊಂಡಿದ್ದಾರೆ. ಆ ಸಂದರ್ಭದ ವಿಡಿಯೋ ಲಭ್ಯವಾಗಿದೆ.

ನಟ ದರ್ಶನ್ ಅವರು ಬೆನ್ನು ನೋವಿನಿಂದ ಬಳಲುತ್ತಿದ್ದಾರೆ. ಅದರ ನಡುವೆಯೂ ಅವರು ‘ವಾಮನ’ (Vaamana) ಸಿನಿಮಾದ ಪ್ರೀಮಿಯರ್ ಶೋಗೆ ಹಾಜರಿ ಹಾಕಿದ್ದಾರೆ. ಇದು ಧನ್ವೀರ್ ಗೌಡ (Dhanveer Gowda) ನಟನೆಯ ಸಿನಿಮಾ. ಆದ್ದರಿಂದ ಅವರು ಸಪೋರ್ಟ್ ಮಾಡಲು ಬಂದಿದ್ದಾರೆ. ದರ್ಶನ್ ಅವರು ಬಂದ ಕೂಡಲೇ ಅಭಿಮಾನಿಗಳು ಮುತ್ತಿಕೊಂಡರು. ಡಿ ಬಾಸ್ ಎಂದು ಜೈಕಾರ ಕೂಗಲು ಆರಂಭಿಸಿದರು. ಕುಂಟುತ್ತಲೇ ಸಾಗಿದ ದರ್ಶನ್ (Darshan) ಅವರು ಚಿತ್ರತಂಡದ ಜೊತೆ ಕುಳಿತು ‘ವಾಮನ’ ಸಿನಿಮಾ ನೋಡಿದರು. ಈ ಚಿತ್ರ ಏಪ್ರಿಲ್ 10ರಂದು ರಾಜ್ಯದ್ಯಂತ ಬಿಡುಗಡೆ ಆಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More