ನೋವಿನಲ್ಲೂ ಅಭಿಮಾನಿಗಳನ್ನು ನೋಡಿ ನಗುತ್ತಾ ಕೈ ಬೀಸಿದ ದರ್ಶನ್

Updated on: Dec 24, 2024 | 6:53 PM

‘ಚಾಲೆಂಜಿಂಗ್ ಸ್ಟಾರ್​’ ದರ್ಶನ್ ಎಲ್ಲಿಗೇ ಹೋದರೂ ಅಲ್ಲಿ ಜನರು ಸೇರುತ್ತಾರೆ. ಅವರಿಗೆ ಇರುವ ಅಭಿಮಾನಿ ಬಳಗ ದೊಡ್ಡದು. ನ್ಯಾಯಾಲಯದಿಂದ ಅನುಮತಿ ಪಡೆದು ದರ್ಶನ್ ಅವರು ಮೈಸೂರಿಗೆ ಭೇಟಿ ನೀಡಿದ್ದಾರೆ. ಬೆನ್ನು ನೋವಿಗೆ ಚಿಕಿತ್ಸೆ ಪಡೆಯುವ ಉದ್ದೇಶದಿಂದ ಅವರು ಖಾಸಗಿ ಆಸ್ಪತ್ರೆಗೆ ಬಂದಿದ್ದಾರೆ. ಫ್ಯಾನ್ಸ್​ ನೋಡಿ ಅವರು ಕೈ ಬೀಸಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.

ನಟ ದರ್ಶನ್ ಅವರು ಬೆನ್ನು ನೋವಿನಿಂದ ಬಳಲುತ್ತಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಅವರು ಮೈಸೂರಿಗೆ ತೆರಳಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿ ವಾಪಸ್ ಹೊರಡುವಾಗ ಅಭಿಮಾನಿಗಳತ್ತ ಅವರು ಕೈ ಬೀಸಿದರು. ‘ಬಾಸ್​ ಬಾಸ್​ ಡಿ ಬಾಸ್​’ ಎಂದು ಫ್ಯಾನ್ಸ್ ಜೈಕಾರ ಕೂಗಿದ್ದಾರೆ. ದರ್ಶನ್ ಅವರನ್ನು ನೋಡಲು ಅಪಾರ ಸಂಖ್ಯೆಯ ಜನರು ಆಸ್ಪತ್ರೆ ಎದುರು ನೆರೆದಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More