ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
Vijayalakshmi Darshan-Sudeep: ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರು ದಾವಣಗೆರೆಯಲ್ಲಿ ಮಾತನಾಡಿ ಸುದೀಪ್ ಅವರಿಗೆ ಟಾಂಗ್ ಕೊಟ್ಟಿದ್ದಾರೆ. ದರ್ಶನ್ ಜೈಲಿನಲ್ಲಿದ್ದಾಗ ಕೆಲವರು ಅವರ ಬಗ್ಗೆ, ಅವರ ಫ್ಯಾನ್ಸ್ ಬಗ್ಗೆ, ಹೊರಗಡೆ ಹಾಗೂ ಮಾಧ್ಯಮಗಳಿಗೆ ಹೇಳಿಕೆ ನೀಡುತ್ತಾರೆ, ಆದರೆ ದರ್ಶನ್ ಇದ್ದಾಗ ಮಾತ್ರ ಅವರು ಗೊತ್ತೇ ಆಗದಂತೆ ಇರುತ್ತಾರೆ, ಬೆಂಗಳೂರಿನಲ್ಲಿ ಇದ್ದಾರಾ ಎಂದು ಗೊತ್ತೇ ಆಗದಂತೆ ಇರುತ್ತಾರೆ, ದರ್ಶನ್ ಟೀಕಿಸುವವರ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ, ಬೇಜಾರು ಮಾಡಿಕೊಳ್ಳಲ್ಲ, ದರ್ಶನ್ ಅಭಿಮಾನಿಗಳಾದ ನೀವೂ ತಲೆಕೆಡಿಸಿಕೊಳ್ಳಬೇಡಿ ಎಂದು ವಿಜಯಲಕ್ಷ್ಮಿ ಹೇಳಿದ್ದಾರೆ. ವಿಡಿಯೋ ನೋಡಿ....
ಸುದೀಪ್ (Sudeep) ನಟನೆಯ ‘ಮಾರ್ಕ್’ ಸಿನಿಮಾ ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇದೆ. ಸಿನಿಮಾದ ಪ್ರಚಾರ ಚಾಲ್ತಿಯಲ್ಲಿದ್ದು, ನಿನ್ನೆ (ಡಿಸೆಂಬರ್ 20) ಹುಬ್ಬಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸುದೀಪ್, ತಮ್ಮ ಸಿನಿಮಾದ ವಿರುದ್ಧ ನೆಗೆಟಿವ್ ಪ್ರಚಾರ ಮಾಡುತ್ತಿರುವ ದರ್ಶನ್ ಅಭಿಮಾನಿಗಳಿಗೆ ಪರೋಕ್ಷ ಎಚ್ಚರಿಕೆ ನೀಡಿದರು. ಇದೀಗ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರು ದಾವಣಗೆರೆಯಲ್ಲಿ ಮಾತನಾಡಿ ಸುದೀಪ್ ಅವರಿಗೆ ಟಾಂಗ್ ಕೊಟ್ಟಿದ್ದಾರೆ. ದರ್ಶನ್ ಜೈಲಿನಲ್ಲಿದ್ದಾಗ ಕೆಲವರು ಅವರ ಬಗ್ಗೆ, ಅವರ ಫ್ಯಾನ್ಸ್ ಬಗ್ಗೆ, ಹೊರಗಡೆ ಹಾಗೂ ಮಾಧ್ಯಮಗಳಿಗೆ ಹೇಳಿಕೆ ನೀಡುತ್ತಾರೆ, ಆದರೆ ದರ್ಶನ್ ಇದ್ದಾಗ ಮಾತ್ರ ಅವರು ಗೊತ್ತೇ ಆಗದಂತೆ ಇರುತ್ತಾರೆ, ಬೆಂಗಳೂರಿನಲ್ಲಿ ಇದ್ದಾರಾ ಎಂದು ಗೊತ್ತೇ ಆಗದಂತೆ ಇರುತ್ತಾರೆ, ದರ್ಶನ್ ಟೀಕಿಸುವವರ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ, ಬೇಜಾರು ಮಾಡಿಕೊಳ್ಳಲ್ಲ, ದರ್ಶನ್ ಅಭಿಮಾನಿಗಳಾದ ನೀವೂ ತಲೆಕೆಡಿಸಿಕೊಳ್ಳಬೇಡಿ ಎಂದು ವಿಜಯಲಕ್ಷ್ಮಿ ಹೇಳಿದ್ದಾರೆ. ವಿಡಿಯೋ ನೋಡಿ….
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಇಲ್ಲಿ ಕ್ಲಿಕ್ ಮಾಡಿ
