ದರ್ಶನ್​ಗಾಗಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಚಂಡಿಕಾ ಹೋಮ ಮಾಡಿಸಿದ ವಿಜಯಲಕ್ಷ್ಮೀ

|

Updated on: Jul 26, 2024 | 8:21 AM

ದರ್ಶನ್ ಬೇಗ ಬಿಡುಗಡೆ ಆಗಲಿ ಎಂದು ವಿಜಯಲಕ್ಷ್ಮೀ ಅವರು ದೇವರ ಮೋರೆ ಹೋಗಿದ್ದಾರೆ. ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿ ದೇವಾಲಯದಲ್ಲಿ ನವ ಚಂಡಿಕಾ ಹೋಮ ಮಾಡಿಸಿದ್ದಾರೆ. ಈ ವಿಡಯೋ ಸೋಶಿಯಲ್ ವೈರಲ್ ಆಗಿದೆ.

ದರ್ಶನ್ ಅವರಿಗೆ ಜೈಲಿನಲ್ಲಿ ಸಂಕಷ್ಟ ಎದುರಾಗಿದೆ. ಅವರು ಮನೆ ಊಟಕ್ಕೆ ಅವಕಾಶ ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದರು. ಆದರೆ, ಈ ಅರ್ಜಿಯನ್ನು ಕೋರ್ಟ್ ತಳ್ಳಿ ಹಾಕಿದೆ. ಅವರು ದೇಹದ ತೂಕವನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ಕೂಡ ವರದಿ ಆಗಿದೆ. ದರ್ಶನ್ ಬೇಗ ಬಿಡುಗಡೆ ಆಗಲಿ ಎಂದು ವಿಜಯಲಕ್ಷ್ಮೀ ಅವರು ದೇವರ ಮೋರೆ ಹೋಗಿದ್ದಾರೆ. ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿ ದೇವಾಲಯದಲ್ಲಿ ನವ ಚಂಡಿಕಾ ಹೋಮ ಮಾಡಿಸಿದ್ದಾರೆ. ಇದರ ಪೂರ್ಣಾಹುತಿಯಲ್ಲಿ ವಿಜಯಲಕ್ಷ್ಮೀ ಭಾಗಿ ಆಗಿದ್ದಾರೆ. ನರಸಿಂಹ ಅಡಿಗ ನೇತೃತ್ವದಲ್ಲಿ ನವ ಚಂಡಿಕಾ ಹೋಮ, ಪಾರಾಯಣ ನಡೆದಿದೆ. ದರ್ಶನ್ ಬಂಧನ ಮುಕ್ತಿಗಾಗಿ ವಿಜಯಲಕ್ಷ್ಮೀ ಪ್ರಾರ್ಥನೆ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.