ಜಾಮೀನು ಸಿಕ್ಕಿದ್ದಕ್ಕೆ ಚಾಮುಂಡಿ ಬೆಟ್ಟದಲ್ಲಿ ಹರಿಕೆ ತೀರಿಸಿದ ದರ್ಶನ್ ಪತ್ನಿ ವಿಜಯಲಕ್ಷ್ಮಿ
ದರ್ಶನ್ ಅವರಿಗೆ ಜಾಮೀನು ಸಿಗಲಿ ಎಂದು ಅವರ ಪತ್ನಿ ವಿಜಯಲಕ್ಷ್ಮಿ ಅನೇಕ ದೇವರಿಗೆ ಹರಿಕೆ ಹೊತ್ತಿದ್ದರು. ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದರು. ಇತ್ತೀಚೆಗೆ ದರ್ಶನ್ಗೆ ಹೈಕೋರ್ಟ್ ಜಾಮೀನು ನೀಡಿತ್ತು. ಅಲ್ಲದೇ, ಮೈಸೂರಿಗೆ ಹೋಗಲು ಅನುಮತಿ ಕೂಡ ನೀಡಿತ್ತು. ಈಗ ವಿಜಯಲಕ್ಷ್ಮಿ ಅವರು ಚಾಮುಂಡಿ ಬೆಟ್ಟಕ್ಕೆ ತೆರಳಿ ಹರಿಕೆ ತೀರಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಆರೋಪಿ ಆಗಿರುವ ದರ್ಶನ್ಗೆ ಕೆಲವೇ ದಿನಗಳ ಹಿಂದೆ ಜಾಮೀನು ನೀಡಲಾಗಿತ್ತು. ಅಲ್ಲದೇ, ಅವರು ಮೈಸೂರಿಗೆ ಭೇಟಿ ನೀಡಲು ಕೂಡ ಅನುಮತಿ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಮೈಸೂರಿಗೆ ಬಂದು ಚಾಮುಂಡಿ ಬೆಟ್ಟದಲ್ಲಿ ಹರಿಕೆ ತೀರಿಸಿದ್ದಾರೆ. ಆ ಸಂದರ್ಭದ ವಿಡಿಯೋ ಲಭ್ಯವಾಗಿದೆ. ದರ್ಶನ್ ಸಲುವಾಗಿ ಅವರ ಕುಟುಂಬದವರು ಪ್ರಾರ್ಥನೆ ಸಲ್ಲಿಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos