ಜಾಮೀನು ಸಿಕ್ಕಿದ್ದಕ್ಕೆ ಚಾಮುಂಡಿ ಬೆಟ್ಟದಲ್ಲಿ ಹರಿಕೆ ತೀರಿಸಿದ ದರ್ಶನ್ ಪತ್ನಿ ವಿಜಯಲಕ್ಷ್ಮಿ

Updated on: Dec 23, 2024 | 5:58 PM

ದರ್ಶನ್ ಅವರಿಗೆ ಜಾಮೀನು ಸಿಗಲಿ ಎಂದು ಅವರ ಪತ್ನಿ ವಿಜಯಲಕ್ಷ್ಮಿ ಅನೇಕ ದೇವರಿಗೆ ಹರಿಕೆ ಹೊತ್ತಿದ್ದರು. ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದರು. ಇತ್ತೀಚೆಗೆ ದರ್ಶನ್​ಗೆ ಹೈಕೋರ್ಟ್​ ಜಾಮೀನು ನೀಡಿತ್ತು. ಅಲ್ಲದೇ, ಮೈಸೂರಿಗೆ ಹೋಗಲು ಅನುಮತಿ ಕೂಡ ನೀಡಿತ್ತು. ಈಗ ವಿಜಯಲಕ್ಷ್ಮಿ ಅವರು ಚಾಮುಂಡಿ ಬೆಟ್ಟಕ್ಕೆ ತೆರಳಿ ಹರಿಕೆ ತೀರಿಸಿದ್ದಾರೆ.

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಆರೋಪಿ ಆಗಿರುವ ದರ್ಶನ್​ಗೆ ಕೆಲವೇ ದಿನಗಳ ಹಿಂದೆ ಜಾಮೀನು ನೀಡಲಾಗಿತ್ತು. ಅಲ್ಲದೇ, ಅವರು ಮೈಸೂರಿಗೆ ಭೇಟಿ ನೀಡಲು ಕೂಡ ಅನುಮತಿ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಮೈಸೂರಿಗೆ ಬಂದು ಚಾಮುಂಡಿ ಬೆಟ್ಟದಲ್ಲಿ ಹರಿಕೆ ತೀರಿಸಿದ್ದಾರೆ. ಆ ಸಂದರ್ಭದ ವಿಡಿಯೋ ಲಭ್ಯವಾಗಿದೆ. ದರ್ಶನ್ ಸಲುವಾಗಿ ಅವರ ಕುಟುಂಬದವರು ಪ್ರಾರ್ಥನೆ ಸಲ್ಲಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More