AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯಾವಾಗಲೂ ದರ್ಶನ್ ನನ್ನ ಮಗ, ಅದು ಬದಲಾಗಲ್ಲ’: ಸುಮಲತಾ ಅಂಬರೀಷ್

‘ಯಾವಾಗಲೂ ದರ್ಶನ್ ನನ್ನ ಮಗ, ಅದು ಬದಲಾಗಲ್ಲ’: ಸುಮಲತಾ ಅಂಬರೀಷ್

ಪ್ರಶಾಂತ್​ ಬಿ.
| Edited By: |

Updated on: Nov 08, 2024 | 8:05 PM

Share

ನಟ ದರ್ಶನ್ ಮಧ್ಯಂತರ ಜಾಮೀನು ಪಡೆದಿದ್ದು, ಆ ಕುರಿತು ನಟಿ ಸುಮಲತಾ ಅಂಬರೀಷ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ದರ್ಶನ್​ ಅವರನ್ನು ಸದ್ಯಕ್ಕೆ ಸುಮಲತಾ ಭೇಟಿ ಆಗಿಲ್ಲ. ವಿಜಯಲಕ್ಷ್ಮಿ ಜೊತೆ ತಾವು ಸಂಪರ್ಕದಲ್ಲಿ ಇರುವುದಾಗಿ ಸಮಲತಾ ತಿಳಿಸಿದ್ದಾರೆ. ‘ನಾವು ನೈತಿಕ ಬೆಂಬಲ ನೀಡುತ್ತೇವೆ. ದರ್ಶನ್​ಗೆ ಒಳ್ಳೆಯದು ಆಗಲಿ ಎಂಬ ನಿರೀಕ್ಷೆಯಲ್ಲಿ ನಾವು ಇದ್ದೇವೆ’ ಎಂದಿದ್ದಾರೆ ಸುಮಲತಾ ಅಂಬರೀಷ್.

‘ದರ್ಶನ್ ಪತ್ನಿ ವಿಜಯಲಕ್ಷ್ಮಿ ಜೊತೆ ನಾನು ಸಂಪರ್ಕದಲ್ಲಿ ಇದ್ದೇನೆ. ದರ್ಶನ್​ಗೆ ಚಿಕಿತ್ಸೆ ನಡೆಯುತ್ತಿದೆ. ಮೊದಲು ಅವರು ವಿಶ್ರಾಂತಿ ಪಡೆದುಕೊಂಡು ಆರೋಗ್ಯ ಸರಿಪಡಿಸಿಕೊಳ್ಳಲಿ. ಕಾನೂನಿನ ಸವಾಲು ಎದುರಿಸಿ ಅವರು ಹೊರಬರಬೇಕು ಅಂತ ಆಸೆ ಇಟ್ಟುಕೊಂಡಿದ್ದೇವೆ. ನಮ್ಮ ಸಂಬಂಧ ಹಾಗೆಯೇ ಉಳಿಯುತ್ತದೆ. ನನ್ನ ಲೈಫ್ ಇರುವವರೆಗೂ ದರ್ಶನ್​ ನನ್ನ ಮಗನೇ. ನಿಜಾಂಶ ಏನು ಎಂಬುದು ಹೊರಗೆ ಬರಬೇಕು. ದರ್ಶನ್​ಗೆ ಒಳ್ಳೆಯದಾಗಬೇಕು. ಅವರು ನಿರಪರಾಧಿ ಅಂತ ಸಾಬೀತಾಗಬೇಕು ಎಂಬುದು ನನ್ನ ಆಸೆ’ ಎಂದು ಸುಮಲತಾ ಅಂಬರೀಷ್ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Prashantha B
Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More