ಬೆಳಗಾವಿ ಹಿಂಡಲಗಾ ಜೈಲಿಂದ ದರ್ಶನ್ ಸ್ನೇಹಿತ ಪ್ರದೋಶ್ ವಾಪಸ್ಸು ಬೆಂಗಳೂರು ಸೆಂಟ್ರಲ್ ಜೈಲಿಗೆ!
ಟಿವಿ9ಗೆ ಲಭ್ಯವಿರುವ ಮಾಹಿತಿಯ ಪ್ರಕಾರ ಹೈಕೋರ್ಟ್ ಆದೇಶದ ಮೇರೆಗೆ ಪ್ರದೋಶ್ರನ್ನು ವಾಪಸ್ಸು ಬೆಂಗಳೂರು ಸೆಂಟ್ರಲ್ ಜೈಲಿಗೆ ಕರೆದೊಯ್ಯಲಾಗುತ್ತಿದೆ. ಕೊಲೆ ಪ್ರಕರಣದಲ್ಲಿ ಪ್ರದೋಶ್ ಪಾತ್ರ ಏನು ಅನ್ನೋದು ಗೊತ್ತಾಗಿಲ್ಲ, ಆದರೆ ಜೈಲುಗಳಲ್ಲಿರುವ 17 ಆರೋಪಿಗಳಲ್ಲಿ ಪ್ರದೋಶ್ ಸಹ ಒಬ್ಬರು.
ಬೆಳಗಾವಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ಗೆ ಬೆಂಗಳೂರು ಪರಪ್ಪನ ಅಗ್ರಹಾರದಲ್ಲಿರುವ ಸೆಂಟ್ರಲ್ ಜೈಲಿನಲ್ಲಿ ರಾಜಾತಿಥ್ಯ ಸಿಗುತ್ತಿದ್ದ ಹಿನ್ನೆಲೆಯಲ್ಲಿ ಅವರನ್ನೂ ಸೇರಿದಂತೆ ಕೆಲ ಸಂಗಡಿಗರನ್ನು ಬೇರೆ ಬೇರೆ ಜೈಲುಗಳಿಗೆ ಶಿಫ್ಟ್ ಮಾಡಲಾಯಿತು. ದರ್ಶನ್ ಸಹಚರ ಮತ್ತು ಪ್ರಕರಣದಲ್ಲಿ ಅರೋಪಿ ನಂಬರ್ 14 ಆಗಿರುವ ಪ್ರದೋಶ್ರನ್ನು ಬೆಳಗಾವಿಯ ಹಿಂಡಲಗಾ ಜೈಲಿಗೆ ಕಳಿಸಲಾಗಿತ್ತು. 44 ದಿನಗಳ ಬಳಿಕ ಅವರನ್ನು ಪುನಃ ಬೆಂಗಳೂರಿನ ಕೇಂದ್ರೀಯ ಕಾರಾಗೃಹಕ್ಕೆ ಬಿಗಿ ಭದ್ರತೆಯಲ್ಲಿ ಕರೆದೊಯ್ಯಲಾಯಿತು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೂವರಿಗೆ ಜಾಮೀನು: ತನಗೂ ಜಾಮೀನು ಸಿಗುವ ನಿರೀಕ್ಷೆಯಲ್ಲಿ ದರ್ಶನ್