‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ

Updated on: Sep 10, 2026 | 10:57 AM

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಖುದ್ದು ಹಾಜರಿಗೆ ನಿರ್ದೇಶನ ನೀಡುವಂತೆ ನಟ ದರ್ಶನ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಹಿಂದೆ 59ನೇ ಸಿ ಸಿ ಎಚ್ ನ್ಯಾಯಾಲಯ ವೈಯಕ್ತಿಕ ಹಾಜರಾತಿ ಅಗತ್ಯವಿಲ್ಲ ಎಂದು ವಿಡಿಯೋ ಕಾನ್ಫರೆನ್ಸ್ ಸೂಚಿಸಿತ್ತು. ವಿಚಾರಣೆ ಸಂದರ್ಭದಲ್ಲಿ ವಕೀಲರೊಂದಿಗೆ ಮಾತನಾಡುವ ಅನುಕೂಲಕ್ಕಾಗಿ ದರ್ಶನ್ ಖುದ್ದು ಹಾಜರಿಗೆ ಮನವಿ ಮಾಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ವೇಳೆ ಖುದ್ದು ಹಾಜರಿಗೆ ಅವಕಾಶ ನೀಡುವಂತೆ ಕೋರಿ ನಟ ದರ್ಶನ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಆರೋಪಿ ದರ್ಶನ್ ಸಲ್ಲಿಸಿರುವ ಈ ಅರ್ಜಿ ಇಂದು ನ್ಯಾಯಮೂರ್ತಿ ವಿ. ಶ್ರೀಶಾನಂದ ಅವರ ಪೀಠದಲ್ಲಿ ವಿಚಾರಣೆಗೆ ಬರಲಿದೆ. ಈ ಹಿಂದೆ, 59ನೇ ಸಿ ಸಿ ಎಚ್ ನ್ಯಾಯಾಲಯವು ದರ್ಶನ್ ಖುದ್ದು ಹಾಜರಿಯ ಅವಶ್ಯಕತೆ ಇಲ್ಲ ಎಂದು ತೀರ್ಪು ನೀಡಿತ್ತು. ಬದಲಾಗಿ, ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಬಹುದು ಎಂದು ಸೂಚಿಸಿತ್ತು. ಯಾವುದೇ ವಿಚಾರಣೆಯ ಸಂದರ್ಭದಲ್ಲಿ ಆರೋಪಿಯು ಖುದ್ದು ಹಾಜರಿದ್ದರೆ, ತಮ್ಮ ವಕೀಲರೊಂದಿಗೆ ನೇರವಾಗಿ ಮಾತನಾಡಲು ಮತ್ತು ಕಾನೂನು ಸಲಹೆಗಳನ್ನು ಪಡೆಯಲು ಅನುಕೂಲವಾಗುತ್ತದೆ ಎಂದು ದರ್ಶನ್ ಕೋರಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಖುದ್ದು ಹಾಜರಿಗೆ ನಿರ್ದೇಶನ ನೀಡುವಂತೆ ನಟ ದರ್ಶನ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಹಿಂದೆ 59ನೇ ಸಿ ಸಿ ಎಚ್ ನ್ಯಾಯಾಲಯ ವೈಯಕ್ತಿಕ ಹಾಜರಾತಿ ಅಗತ್ಯವಿಲ್ಲ ಎಂದು ವಿಡಿಯೋ ಕಾನ್ಫರೆನ್ಸ್ ಸೂಚಿಸಿತ್ತು. ವಿಚಾರಣೆ ಸಂದರ್ಭದಲ್ಲಿ ವಕೀಲರೊಂದಿಗೆ ಮಾತನಾಡುವ ಅನುಕೂಲಕ್ಕಾಗಿ ದರ್ಶನ್ ಖುದ್ದು ಹಾಜರಿಗೆ ಮನವಿ ಮಾಡಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ವೇಳೆ ಖುದ್ದು ಹಾಜರಿಗೆ ಅವಕಾಶ ನೀಡುವಂತೆ ಕೋರಿ ನಟ ದರ್ಶನ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಆರೋಪಿ ದರ್ಶನ್ ಸಲ್ಲಿಸಿರುವ ಈ ಅರ್ಜಿ ಇಂದು ನ್ಯಾಯಮೂರ್ತಿ ವಿ. ಶ್ರೀಶಾನಂದ ಅವರ ಪೀಠದಲ್ಲಿ ವಿಚಾರಣೆಗೆ ಬರಲಿದೆ. ಈ ಹಿಂದೆ, 59ನೇ ಸಿ ಸಿ ಎಚ್ ನ್ಯಾಯಾಲಯವು ದರ್ಶನ್ ಖುದ್ದು ಹಾಜರಿಯ ಅವಶ್ಯಕತೆ ಇಲ್ಲ ಎಂದು ತೀರ್ಪು ನೀಡಿತ್ತು. ಬದಲಾಗಿ, ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಬಹುದು ಎಂದು ಸೂಚಿಸಿತ್ತು. ಯಾವುದೇ ವಿಚಾರಣೆಯ ಸಂದರ್ಭದಲ್ಲಿ ಆರೋಪಿಯು ಖುದ್ದು ಹಾಜರಿದ್ದರೆ, ತಮ್ಮ ವಕೀಲರೊಂದಿಗೆ ನೇರವಾಗಿ ಮಾತನಾಡಲು ಮತ್ತು ಕಾನೂನು ಸಲಹೆಗಳನ್ನು ಪಡೆಯಲು ಅನುಕೂಲವಾಗುತ್ತದೆ ಎಂದು ದರ್ಶನ್ ಕೋರಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More