ದಸರಾ ಎಫೆಕ್ಟ್: ಮೆಜೆಸ್ಟಿಕ್, KSR ರೈಲ್ವೆ ನಿಲ್ದಾಣದಲ್ಲಿ ಜನಜಂಗುಳಿ, ಪ್ರಯಾಣಿಕರ ಪರದಾಟ
ದಸರಾ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣ ಹಾಗೂ ರೈಲ್ವೆ ನಿಲ್ದಾಣಗಳಲ್ಲಿ ತೀವ್ರ ಜನಸಂದಣಿ ಉಂಟಾಗಿದ್ದು, ಯಶವಂತಪುರ ಮತ್ತು ಗೊರಗುಂಟೆಪಾಳ್ಯ ಸೇರಿದಂತೆ ವಿವಿಧೆಡೆ ಭಾರಿ ಟ್ರಾಫಿಕ್ ಜಾಮ್ ಉಂಟಾಗಿ ಪ್ರಯಾಣಿಕರು ಪರದಾಡಿದ್ದಾರೆ. ಊರುಗಳಿಗೆ ತೆರಳಲು ಜನರು ಮುಗಿಬಿದ್ದಿದ್ದ ದೃಶ್ಯಗಳು ಕಂಡುಬಂದಿವೆ.
ಬೆಂಗಳೂರು, ಅಕ್ಟೋಬರ್ 18: ದಸರಾ ಹಬ್ಬದ ಪ್ರಯುಕ್ತ ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣ ಮತ್ತು KSR ರೈಲ್ವೆ ನಿಲ್ದಾಣದಲ್ಲಿ ತೀವ್ರ ಜನಸಂದಣಿ ಉಂಟಾಗಿದೆ. ಊರುಗಳಿಗೆ ತೆರಳಲು ಜನರು ಮುಗಿಬಿದ್ದಿದ್ದು, ನಿನ್ನೆ ತಡರಾತ್ರಿವರೆಗೂ ರೈಲ್ವೆ ನಿಲ್ದಾಣದಲ್ಲಿ ಕಾಲಿಡಲು ಜಾಗವಿಲ್ಲದಷ್ಟು ಜನಸಾಗರ ಕಂಡುಬಂದಿದೆ. ಯಶವಂತಪುರ ಮತ್ತು ಗೊರಗುಂಟೆಪಾಳ್ಯ ಸೇರಿದಂತೆ ನಗರದ ಹಲವೆಡೆ ಭಾರೀ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Oct 18, 2026 07:38 AM
Follow Us

