Video: ದಸರಾ ಹಬ್ಬ: ಊರುಗಳತ್ತ ಮುಖಮಾಡಿದ ಜನ: ಮೆಜೆಸ್ಟಿಕ್ನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಫುಲ್ ರಶ್
ದಸರಾ ಹಬ್ಬದ ರಜೆ ಹಿನ್ನೆಲೆ ಜನರು ತಮ್ಮ ಊರುಗಳತ್ತ ಮುಖಮಾಡಿದ್ದಾರೆ. ನಗರದ ವಿವಿಧೆಡೆಯಿಂದ ನೂರಾರು ಜನರು ಆಗಮಿಸಿದ್ದು, ಬೆಂಗಳೂರಿನ ಮೆಜೆಸ್ಟಿಕ್ನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಫುಲ್ ರಶ್ ಆಗಿದೆ. ಬೆಂಗಳೂರಿನಿಂದ ಇತರೆ ಜಿಲ್ಲೆಗಳಿಗೆ ತೆರಳುವ ಬಸ್ಗಳು ಕೂಡ ಪ್ರಯಾಣಿಕರಿಂದ ತುಂಬಿ ತುಳುಕಿವೆ.
ಬೆಂಗಳೂರು, ಅಕ್ಟೋಬರ್ 22: ದಸರಾ ಹಬ್ಬದ (Dasara) ರಜೆ ಹಿನ್ನೆಲೆ ಜನರು ತಮ್ಮ ಊರುಗಳತ್ತ ಮುಖಮಾಡಿದ್ದಾರೆ. ನಗರದ ವಿವಿಧೆಡೆಯಿಂದ ನೂರಾರು ಜನರು ಆಗಮಿಸಿದ್ದು, ಬೆಂಗಳೂರಿನ ಮೆಜೆಸ್ಟಿಕ್ನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಫುಲ್ ರಶ್ ಆಗಿದೆ. ಬೆಂಗಳೂರಿನಿಂದ ಇತರೆ ಜಿಲ್ಲೆಗಳಿಗೆ ತೆರಳುವ ಬಸ್ಗಳು ಕೂಡ ಪ್ರಯಾಣಿಕರಿಂದ ತುಂಬಿ ತುಳುಕಿವೆ. ಒಂದು ಕಡೆ ಬಸ್ಗಳು ರಶ್ ಆಗಿದ್ದು, ಇನ್ನೊಂದು ಕಡೆ ಸರಿಯಾದ ಸಮಯಕ್ಕೆ ಬಸ್ ಸಿಗದೆ ಮಹಿಳೆಯರು ಮತ್ತು ಮಕ್ಕಳು ಪರದಾಡಿದ್ದಾರೆ. ಕೆಎಸ್‌ಆರ್‌ಟಿಸಿ ಸಂಚಾರಿ ನೀರಿಕ್ಷಕರೊಂದಿಗೆ ಪ್ರಯಾಣಿಕರ ಮಾತಿನ ಚಕಮಕಿ ಕೂಡ ನಡೆದಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos