ಸಾಲು ರಜೆ, ಊರುಗಳತ್ತ ಮುಖಮಾಡಿದ ಜನ: ನೆಲಮಂಗಲದಲ್ಲಿ ಭಾರಿ ಟ್ರಾಫಿಕ್

Updated on: Oct 02, 2025 | 2:31 PM

ಹಬ್ಬದ ಹಾಗೂ ವಾರಾಂತ್ಯದ ಸಾಲು ಸಾಲು ರಜೆಗಳ ಹಿನ್ನೆಲೆಯಲ್ಲಿ ಗುರುವಾರ ದಿನವಿಡೀ ವಾಹನ ಸಂಚಾರ ಭಾರೀ ಹೆಚ್ಚಾಗಿದ್ದು, ನೆಲಮಂಗಲದ ಕುಣಿಗಲ್ ಬೈಪಾಸ್ ರಸ್ತೆಯಲ್ಲಿ ಸಂಚಾರ ದಟ್ಟಣೆ ವಿಪರೀತವಾಗಿದೆ. ಟ್ರಾಫಿಕ್ ನಿಯಂತ್ರಿಸಲು ಪೊಲೀಸರು ಸಂಚಾರ ಹರಸಾಹಸ ಪಡುತ್ತಿದ್ದಾರೆ. ನೆಲಮಂಗಲ ಟ್ರಾಫಿಕ್ ವಿಡಿಯೋ ಇಲ್ಲಿದೆ.

ನೆಲಮಂಗಲ, ಅಕ್ಟೋಬರ್ 2: ದಸರಾ ಹಬ್ಬ ಹಾಗೂ ವಾರಾಂತ್ಯದ ಸಾಲು ರಜೆಗಳ ಹಿನ್ನೆಲೆಯಲ್ಲಿ ಬೆಂಗಳೂರಿಗರು ಊರುಗಳತ್ತ ಹಾಗೂ ಪ್ರವಾಸಿ ತಾಣಗಳತ್ತ ಮುಖಮಾಡಿದ್ದಾರೆ. ಆಯುಧಪೂಜೆ ಮುಗಿಸಿಕೊಂಡ ನಂತರ ಊರುಗಳಿಗೆ ಹಾಗೂ ಪ್ರವಾಸಕ್ಕೆ ಹೊರಟ ಜನರ ಪ್ರವಾಹದಿಂದ ನೆಲಮಂಗಲದ ಕುಣಿಗಲ್ ಬೈಪಾಸ್ ರಸ್ತೆಯಲ್ಲಿ ಟ್ರಾಫಿಕ್ ಬಿಸಿ ಉಂಟಾಗಿದೆ. ರಾಷ್ಟ್ರೀಯ ಹೆದ್ದಾರಿ 48 ಮೂಲಕ 75ಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗದಲ್ಲಿ ಸಹ ವಾಹನಗಳ ದಟ್ಟಣೆ ಹೆಚ್ಚಿದ್ದು, ಪ್ರಯಾಣಿಕರು ಗಂಟೆಗಳ ಕಾಲ ಟ್ರಾಫಿಕ್​​ನಲ್ಲಿ ಸಿಲುಕಿಕೊಂಡಿದ್ದಾರೆ.

ವಿಡಿಯೋ, ವರದಿ: ಮಂಜುನಾಥ್, ಟಿವಿ9, ನೆಲಮಂಗಲ

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More