Assembly Polls: ಬೆಳಗಾವಿ ಗ್ರಾಮೀಣ ಮತಕ್ಷೇತ್ರದಲ್ಲಿ ಚುನಾವಣೆ ದಿನಾಂಕ ಪ್ರಕಟವಾಗುವ ಮೊದಲೇ ಗಿಫ್ಟ್​ಗಳ ವಿತರಣೆ!

| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Jan 18, 2023 | 1:37 PM

ಬೆಳಗಾವಿ ಗ್ರಾಮೀಣ ಮತಕ್ಷೇತ್ರದಲ್ಲಿ ರಾಷ್ಟ್ರೀಯ ಪಕ್ಷಗಳ ಸಂಭವನೀಯ ಅಭ್ಯರ್ಥಿಗಳು ಮತದಾರರನ್ನು ಓಲೈಸಿಕೊಳ್ಳಲು ಗಿಫ್ಟ್​​ ನೀಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ.

ಬೆಳಗಾವಿ:  ಸ್ಟಾರ್ಟ್ ಅಪ್ ಗಳನ್ನು ಆರಂಭಿಸುವ ಯೋಚನೆಯಿರುವ ಯುವಕರು ರಾಜ್ಯ ವಿಧಾನ ಸಭಾ ಚುನಾವಣೆ (assembly polls) ಮುಗಿಯುವವರೆಗೆ ಆ ಯೋಜನೆಯನ್ನು ಕೈಬಿಟ್ಟು ಬೆಳಗಾವಿ ಜಿಲ್ಲೆಯಲ್ಲಿ ಸೀರೆ ಮತ್ತು ಮಿಕ್ಸರ್ ಗ್ರೈಂಡರ್ ಗಳ ಸಗಟು ವ್ಯಾಪಾರ ಮಾಡುವುದರಲ್ಲಿ ಹೆಚ್ಚು ಲಾಭವಿದೆ ಅಂತ ನಮಗನಿಸುತ್ತಿದೆ. ಚುನಾವಣೆ ದಿನಾಂಕ ಇನ್ನೂ ಪ್ರಕಟಗೊಂಡಿಲ್ಲ. ಆದರೆ ಬೆಳಗಾವಿ ಗ್ರಾಮೀಣ ಮತಕ್ಷೇತ್ರದಲ್ಲಿ ರಾಷ್ಟ್ರೀಯ ಪಕ್ಷಗಳ ಸಂಭವನೀಯ ಅಭ್ಯರ್ಥಿಗಳು ಮತದಾರರನ್ನು ಓಲೈಸಿಕೊಳ್ಳಲು ಗಿಫ್ಟ್​​ ನೀಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ. ಮೊದಲು ಇಲ್ಲಿನ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಮಿಕ್ಸರ್ ಗಳನ್ನು ವಿತರಿಸಿದರೆ, ಬಿಜೆಪಿಯ ರಮೇಶ್ ಜಾರಕಿಹೊಳಿಯ (Ramesh Jarkiholi) ಆಪ್ತನೆನಿಸಿಕೊಂಡಿರುವ ಹಿಂಡಲಗಾ ಗ್ರಾಮ ಪಂಚಾಯಿತಿಯ ಅಧ್ಯಕ್ಷ ನಾಗೇಶ್ ಮನೋಳ್ಕರ್ ಮಹಿಳೆಯರಿಗೆ ಸೀರೆ ಮತ್ತು ಹಾಟ್ ಪ್ಯಾಕ್ ಗಳನ್ನು ವಿತರಿಸಿದ್ದಾರೆ. ರಾಜ್ಯ ಚುನಾವಣಾ ಅಯೋಗಕ್ಕೆ ಇದೆಲ್ಲ ಗೊತ್ತಾಗುವುದಿಲ್ಲವೇ?

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

 

Follow us on