AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಆಶ್ಚರ್ಯಗೊಂಡ ಸಚಿವ ಬಸವಂತಪ್ಪ

ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಆಶ್ಚರ್ಯಗೊಂಡ ಸಚಿವ ಬಸವಂತಪ್ಪ

ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Sep 28, 2026 | 4:18 PM

Share

ದಾವಣಗೆರೆ ತಾಲೂಕಿನ ಕಾಟೀಹಳ್ಳಿ ಅಂಗನವಾಡಿಗೆ ಸಚಿವ ಕೆ.ಎಸ್. ಬಸವಂತಪ್ಪ ಭೇಟಿ ನೀಡಿದಾಗ ಅಚ್ಚರಿ ಕಾದಿತ್ತು. ಮಕ್ಕಳು ಸೊಳ್ಳೆಪರದೆ ಹಾಕಿ ಮಲಗಿದ್ದನ್ನು ನೋಡಿ, ಸಚಿವರು "ಪಾಠ ಮಾಡಿಸದೆ ಏಕೆ ಮಲಗಿಸಿದ್ದೀರಿ?" ಎಂದು ಶಿಕ್ಷಕಿಯರನ್ನು ಪ್ರಶ್ನಿಸಿದರು. ಇದಕ್ಕೆ ಶಿಕ್ಷಕಿಯರು, "ಇದು ಮಕ್ಕಳ ವಿಶ್ರಾಂತಿ ಸಮಯ" ಎಂದು ಸ್ಪಷ್ಟಪಡಿಸಿದರು.

ದಾವಣಗೆರೆ, ಸೆಪ್ಟೆಂಬರ್​​ 28: ವಿವಿಧ ಕಾಮಗಾರಿಗಳ ಉದ್ಘಾಟನೆಗೆ ತೆರಳಿದ್ದ ಸಚಿವ ಕೆ.ಎಸ್.ಬಸವಂತಪ್ಪ, ಗ್ರಾಮದ ಶಾಲೆ ಹಾಗೂ ಅಂಗನವಾಡಿಗೆ ದಿಢೀರ್ ಭೇಟಿ ನೀಡಿದರು. ಈ ವೇಳೆ ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಕ್ಕಳು ಮಲಗಿದ್ದು ನೋಡಿ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ದಾವಣಗೆರೆ ತಾಲೂಕಿನ ಕಾಟೀಹಳ್ಳಿಯ ಅಂಗನವಾಡಿ ಕೇಂದ್ರದಲ್ಲಿ ಘಟನೆ ನಡೆದಿದೆ. ‘ಪಾಠ ಮಾಡುವುದು ಬಿಟ್ಟು ಏಕೆ ಮಲಗಿಸಿದ್ದೀರೆಂದು’ ಸಚಿವ ಕೆ.ಎಸ್.ಬಸವಂತಪ್ಪ ಪ್ರಶ್ನಿಸಿದ್ದು, ‘ಈಗ ಮಕ್ಕಳ ವಿಶ್ರಾಂತಿ ಸಮಯ’ ಎಂದು ಅಂಗನವಾಡಿಯ ಶಿಕ್ಷಕಿಯರು ಹೇಳಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
ಬಸವರಾಜ್​ ದೊಡ್ಡಮನಿ, ದಾವಣಗೆರೆ
ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More