ದಾವಣಗೆರೆ: ನಗರಸಭೆ ಆಯುಕ್ತರ ಮೇಲೆ ಹಲ್ಲೆಗೆ ಮುಂದಾದ ಶಾಸಕ ಬಿಪಿ ಹರೀಶ್, ವಿಡಿಯೋ ನೋಡಿ

BJP MLA BP Harish: ದಾವಣಗೆರೆ ಜಿಲ್ಲೆಯ ಹರಿಹರ ಕ್ಷೇತ್ರದ ಬಿಜೆಪಿ ಶಾಸಕ ಬಿಪಿ ಹರೀಶ್​ ನಗರಸಭೆ ಆಯುಕ್ತರ ಮೇಲೆ ಹಲ್ಲೆಗೆ ಮುಂದಾದ ಘಟನೆ ಸೋಮವಾರ ನಡೆದಿದೆ. ಆಯುಕ್ತರನ್ನು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡ ಶಾಸಕರು, ಹಲ್ಲೆಗೆ ಮುಂದಾದ ವಿಡಿಯೋ ಇಲ್ಲಿದೆ ನೋಡಿ.

ದಾವಣಗೆರೆ, ನವೆಂಬರ್ 11: ಹರಿಹರ ನಗರಸಭೆ ಆಯುಕ್ತ ಸುಬ್ರಮಣ್ಯ ಶೆಟ್ಟಿ ಮೇಲೆ ಹರಿಹರ ಬಿಜೆಪಿ ಶಾಸಕ ಬಿಪಿ ಹರೀಶ್ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ. ಹರಿಹರದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರ ಶಾಖಾ ಕಚೇರಿ ಉದ್ಘಾಟನಾ ಸಮಾರಂಭದ ವೇಳೆ ಅಧಿಕಾರಿ ಮೇಲೆ ಸಿಟ್ಟಾದ ಶಾಸಕರು, ದೂಡಾ ಅಧ್ಯಕ್ಷ ದಿನೇಶ್ ಶೆಟ್ಟಿ ಎದಿರು ಸುಬ್ರಮಣ್ಯ ಶೆಟ್ಟಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಅಲ್ಲದೆ, ಹಲ್ಲೆಗೆ ಮುಂದಾಗಿದ್ದಾರೆ. ಶಾಖಾ ಕಚೇರಿ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆಯಲ್ಲಿ ಶಾಸಕರ ಹೆಸರು ಹಾಕದಿರುವ ವಿಚಾರವಾಗಿ ಹರೀಶ್ ಸಿಟ್ಟಾಗಿದ್ದಾರೆ.

ಸಿಟ್ಟಿನಿಂದ ಶಾಸಕರು ಕೆಂಡಾಮಂಡಲವಾಗಿದ್ದು, ‘ಥೂ ಮುಖ ತೋರಿಸಬೇಡ, ಹೋಗು ಆ ಕಡೆ. ಏಯ್ ನನಗೇ ಸರಿಯಾಗಿ ಮಾತನಾಡು ಅಂತೀಯ, ಮುಚ್ಕೊಂಡಿರು. ಸಾಹುಕಾರನ ಮೆಚ್ಚಿಸೋಕೆ ಇದನ್ನೆಲ್ಲ ಮಾಡ್ತೀಯಾ? ನೀನು ಮತ್ತೆ ಮಾತನಾಡಿದರೆ ಹುಷಾರು, ನಡಿ ಆ ಕಡೆ ಹೋಗು’ ಎಂದು ಗದರಿದ್ದಾರೆ. ಸಮೀಪದಲ್ಲಿದ್ದವರು ಶಾಸಕರನ್ನು ತಡೆದಿದ್ದಾರೆ. ನಂತರ ಕಾರ್ಯಕ್ರಮಕ್ಕೆ ಹಾಜರಾಗದೆ ಶಾಸಕರು ವಾಪಸಾಗಿದ್ದಾರೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More
Loading...
Unable to load recommendations.
Follow Us